ಮುಂದಿನ ತಿಂಗಳು ಭಾರತಕ್ಕೆ ಲಗ್ಗೆ ಇಡಲಿದೆ ರಿಯಲ್‌ಮಿ G ಸ್ಮಾರ್ಟ್‌ಫೋನ್‌ ಸರಣಿ!

|

ಜನಪ್ರಿಯ ಮೊಬೈಲ್‌ ತಯಾರಿಕಾ ಕಂಪನಿಗಳಲ್ಲಿ ಒಂದಾದ ರಿಯಲ್‌ ಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರಿಯಲ್‌ ಮಿ ರಿಯಲ್‌ಮಿ G ಸ್ಮಾರ್ಟ್‌ಫೋನ್ ಸರಣಿಯನ್ನು ಇತ್ತೀಚಿಗಷ್ಟೆ ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಸರಣಿಯನ್ನು ಮುಂದಿನ ತಿಂಗಳು (ಮೇ) ಭಾರತದಲ್ಲಿ ಅನಾವರಣ ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸರಣಿಯು ರಿಯಲ್‌ಮಿ GT ಮತ್ತು ರಿಯಲ್‌ಮಿ GT ನಿಯೋ ಮಾಡೆಲ್‌ಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ರಿಯಲ್‌ಮಿ

ಹೌದು, ರಿಯಲ್‌ ಮಿ ಕಂಪನಿಯು ರಿಯಲ್‌ಮಿ GT ಫೋನ್ ಸರಣಿಯನ್ನು ಇದೇ ಮೇ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ ಎನ್ನಲಾಗಿದೆ. ಈ ಸರಣಿಯು ರಿಯಲ್‌ಮಿ GT ಮತ್ತು ರಿಯಲ್‌ಮಿ GT ನಿಯೋ ಫೋನ್‌ಗಳನ್ನು ಹೊಂದಿರಲಿದೆ. ಇವುಗಳಲ್ಲಿ ರಿಯಲ್‌ಮಿ GT ನಿಯೋ ಫೋನ್ ಹೆಚ್ಚು ಗಮನ ಸೆಳೆದಿದೆ. ಈ ಫೋನ್ 6GB + 128GB, 8GB + 128GB ಮತ್ತು 12GB + 256GB ಇದರೊಂದಿಗೆ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಹೊಂದಿದೆ. ಡಾಲ್ಬಿ ಸೌಂಡ್‌ ಬೆಂಬಲವನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.43 ಇಂಚಿನ ಹೆಚ್‌ಡಿ + AMOLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿ ನಡುವಿನ ಅಂತರವು 91.7 ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ ಮೀಡಿಯಾ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6GB + 128GB, 8GB + 128GB ಮತ್ತು 12GB + 256GB ಆಯ್ಕೆ ಹೊಂದಿದೆ ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ ವಿಶೇಷ

ತ್ರಿವಳಿ ಕ್ಯಾಮೆರಾ ವಿಶೇಷ

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ ಹಿಂಬದಿಯಲ್ಲಿ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಫೋನ್ 158.5 x 73.3 x 8.4mm ಸುತ್ತಳತೆಯನ್ನು ಹೊಂದಿದ್ದು, 179g ತೂಕವನ್ನು ಪಡೆದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ 6GB + 128GB ವೇರಿಯಂಟ್ ಬೆಲೆಯು ಚೀನಾದಲ್ಲಿ CNY 1,799 (ಭಾರತದಲ್ಲಿ ಅಂದಾಜು 20,100ರೂ. ಎನ್ನಲಾಗಿದೆ). ಅದೇ ರೀತಿ 8GB + 128GB ವೇರಿಯಂಟ್ ಬೆಲೆಯು ಚೀನಾದಲ್ಲಿ CNY 1,999 (ಭಾರತದಲ್ಲಿ ಅಂದಾಜು 22,400ರೂ) ಆಗಿದೆ. ಫ್ಯಾಂಟಸಿ, ಗೀಕ್ ಸಿಲ್ವರ್ ಮತ್ತು ಹ್ಯಾಕರ್ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Best Mobiles in India

English summary
Realme GT series, consisting of the GT 5G and the GT Neo, recently made its entry in China and is now expected to launch in India soon.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X