Home
ಸುದ್ದಿಜಾಲ

ರಿಯಲ್‌ಮಿ GT 2 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು!..ಅಚ್ಚರಿಯ ಬೆಲೆ?

ರಿಯಲ್‌ಮಿ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಏ 28) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಲಿದೆ. ಇನ್ನು ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 34,999ರೂ. ಆಗಿದೆ.

ರಿಯಲ್‌ಮಿ GT 2 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು!..ಅಚ್ಚರಿಯ ಬೆಲೆ?

ಹೌದು, ರಿಯಲ್‌ ಮಿ ಕಂಪನಿಯ ರಿಯಲ್‌ಮಿ GT 2 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8 GB RAM + 128 GB ಮತ್ತು 12 GB + 256 GB ಸ್ಟೋರೇಜ್‌ ಆಯ್ಕೆಗಳಾಗಿವೆ. ಇನ್ನುಳಿದಂತೆ ರಿಯಲ್‌ಮಿ GT 2 ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ GT 2 ಫೀಚರ್ಸ್‌
ರಿಯಲ್‌ಮಿ GT 2 ಫೋನ್ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120 Hz ರೀಫ್ರೇಶ್ ರೇಟ್ ಹೊಂದಿದ್ದು, 1,300 nits ಬ್ರೈಟ್ನೆಸ್‌ ಹೊಂದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12 GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000 mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ರಿಯಲ್‌ಮಿ GT 2 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು!..ಅಚ್ಚರಿಯ ಬೆಲೆ?

ರಿಯಲ್‌ಮಿ GT 2 ಪ್ರೊ ಫೀಚರ್ಸ್‌
ರಿಯಲ್‌ಮಿ GT 2 ಪ್ರೊ ಫೋನ್ 6.7 ಇಂಚಿನ 2K ಫುಲ್‌ ಹೆಚ್‌ಡಿ+ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, 1,400 nits ಬ್ರೈಟ್ನೆಸ್‌ ಹೊಂದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

Best Mobiles in India

English summary
Realme GT 2 First Sale Today Via Flipkart: Price and Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+