ರಿಯಲ್‌ಮಿಯ ಈ ಫೋನಿಗೆ ಭಾರೀ ಆಫರ್!..ಇದರ ಲುಕ್‌ಗೆ ಗ್ರಾಹಕರು ಫಿದಾ!
ರಿಯಲ್‌ಮಿ ಮೊಬೈಲ್ ಸಂಸ್ಥೆಯು ಮೀಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿಯೂ ಕೆಲವು ಬೊಂಬಾಟ್ ಮೊಬೈಲ್‌ಗಳ ಆಯ್ಕೆ ಗ್ರಾಹಕರಿಗೆ ನೀಡಿದೆ. ಆ ಪೈಕಿ ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಜನಪ್ರಿಯ ಇ ಕಾಮರ್ಸ್ ದೈತ್ಯ ಅಮೆಜಾನ್ ತಾಣದಲ್ಲಿ ಈಗ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಗ್ರಾಹಕರಿಗೆ ಖುಷಿ ನೀಡಿದೆ.
ಹೌದು, ಅಮೆಜಾನ್ ತಾಣದಲ್ಲಿ ರಿಯಲ್‌ಮಿ GT 2 ಮೊಬೈಲ್ ಶೇ. 28% ರಷ್ಟು ರಿಯಾಯಿತಿ ಪಡೆದಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್ 39,999ರೂ. ದರವನ್ನು ಪಡೆದಿದ್ದು, ಇದೀಗ 28,990ರೂ. ಆಕರ್ಷಕ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದಲೂ ಡಿಸ್ಕೌಂಟ್ ಲಭ್ಯವಾಗಲಿದೆ.

ಇನ್ನು ರಿಯಲ್‌ಮಿ GT 2 ಮೊಬೈಲ್ ಮೂರು ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರ ಜೊತೆಗೆ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದುಕೊಂಡಿದೆ. ಹಾಗಾದರೇ ರಿಯಲ್‌ಮಿ GT 2 ಮೊಬೈಲ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ GT 2 ಫೀಚರ್ಸ್ ಹೀಗಿವೆ
ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ 6.62 ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120 Hz ರೀಫ್ರೇಶ್ ರೇಟ್ ಹೊಂದಿದ್ದು, 1,300 nits ಬ್ರೈಟ್ನೆಸ್ ಪಡೆದಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಸಪೋರ್ಟ್ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದು 12 GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.

ಈ ಮೊಬೈಲ್ ಮೂರು ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದಿದೆ.
ಇದರ ಜೊತೆಗೆ 5000 mAh ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ರಿಯಲ್‌ಮಿ GT 2 ಪ್ರೊ ಫೀಚರ್ಸ್ ಹೀಗಿವೆ
ರಿಯಲ್‌ಮಿ GT 2 ಪ್ರೊ ಮೊಬೈಲ್ 6.7 ಇಂಚಿನ 2K ಫುಲ್ ಹೆಚ್‌ಡಿ+ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, 1,400 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ.
ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಜೊತೆಗೆ 5000mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಸಪೋರ್ಟ್ ಹೊಂದಿದೆ.


Click it and Unblock the Notifications








