Home
ಸುದ್ದಿಜಾಲ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದೆ. ಇದು LTPO 2.0-ಬೆಂಬಲಿತ 'ಸೂಪರ್ ರಿಯಾಲಿಟಿ' ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ 2K LTPO 2.0 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 1,440x3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ 2K LTPO 2.0 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಸ್ಕ್ರೀನ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ಟೆಕ್ನಾಲಜಿಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB + 128GB ಸ್ಟೋರೇಜ್ ಮಾದರಿಗೆ 49,999ರೂ. ಮತ್ತು 12GB + 256GB ಸ್ಟೋರೇಜ್ ಆಯ್ಕೆಗೆ 57,999ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪೇಪರ್ ಗ್ರೀನ್, ಪೇಪರ್ ವೈಟ್ ಮತ್ತು ಸ್ಟೀಲ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇದು ಇದೇ ಏಪ್ರಿಲ್ 14 ರಿಂದ ರಿಯಲ್‌ಮಿ.ಕಾಮ್‌, ಫ್ಲಿಪ್‌ಕಾರ್ಟ್‌ ಮತ್ತು ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟವಾಗಲಿದೆ.

Best Mobiles in India

English summary
realme gt 2 pro, realme gt 2 pro specifications, realme gt 2 pro price in india, realme gt 2 pro features
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+