ರಿಯಲ್‌ಮಿ ಮತ್ತು ಮೊಟೊರೊಲಾ ಕಂಪೆನಿಯ ಈ ಫೋನ್‌ಗಳಿಗೆ ಸಿಗಲಿದೆ ಬಿಗ್‌ ಡಿಸ್ಕೌಂಟ್‌!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇವುಗಳಲ್ಲಿ ಮೊಟೊರೊಲಾ ಮತ್ತು ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ವಿಶೇಷವಾದ ಸ್ಥಾನವನ್ನು ಪಡೆದುಕೊಂಡಿವೆ. ಇನ್ನು ಈ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಇ-ಕಾಮರ್ಸ್‌ ತಾಣಗಳಲ್ಲಿ ವಿಶೇಷ ಡಿಸ್ಕೌಂಟ್‌ ಅನ್ನು ಪಡೆದುಕೊಳ್ಳುವುದು ಸಾಮಾನ್ಯ. ಸದ್ಯ ಇದೀಗ ಮೊಟೊರೊಲಾ ಮತ್ತು ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ ಮೇಲೆ ಫ್ಲಿಪ್‌ಕಾರ್ಟ್‌ ಬಿಗ್‌ ಆಫರ್‌ ಅನ್ನು ನೀಡಿದೆ.

ಸ್ಮಾರ್ಟ್‌ಫೋನ್‌

ಹೌದು, ರಿಯಲ್‌ಮಿ ಮತ್ತು ಮೊಟೊರೊಲಾ ಕಂಪೆನಿಯ ರಿಯಲ್‌ಮಿ GT 2ಪ್ರೊ ಮತ್ತು ಮೊಟೊರೊಲಾ ಎಡ್ಜ್‌ 30ಪ್ರೊ ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್‌ ಪಡೆದುಕೊಂಡಿವೆ. ಈ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆ 49,999ರೂ. ಆಗಿದ್ದು, ಫ್ಲಿಪ್‌ಕಾರ್ಟ್‌ 5,000ರೂ.ಗಳಷ್ಟು ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರೆ ಈ ಡಿಸ್ಕೌಂಟ್‌ ಪಡೆಯಬೇಕಾದರೆ ನೀವು HDFC ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬಳಸಬೇಕಾಗುತ್ತದೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್‌ ಪಡೆದುಕೊಳ್ಳುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ

ರಿಯಲ್‌ಮಿ GT 2ಪ್ರೊ ಮತ್ತು ಮೊಟೊರೊಲಾ ಎಡ್ಜ್‌ 30ಪ್ರೊ ಸ್ಮಾರ್ಟ್‌ಫೋನ್‌ಗಳ ಮೂಲ ಬೆಲೆ 49,999ರೂ.ಆಗಿದೆ. ಇವುಗಳ ಮೇಲೆ ಫ್ಲಿಪ್‌ಕಾರ್ಟ್‌ನಲ್ಲಿ 5,000ರೂ. ರಿಯಾಯಿತಿ ದೊರೆಯಲಿದೆ. ರಿಯಾಯಿತಿಯ ನಂತರ ಈ ಎರಡೂ ಫೋನ್‌ಗಳ ಬೆಲೆಯು 44,999ರೂ. ಆಗಲಿದೆ. ಇದಲ್ಲದೆ ನೀವು ಈ ಸ್ಮಾರ್ಟ್‌ಫೋನ್‌ಗಳ ಖರೀದಿಯ ಮೇಲೆ ಇತರ ಕೊಡುಗೆಗಳನ್ನು ಸಹ ಪಡೆಯಬಹುದು. ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಿದರೆ ಗೂಗಲ್‌ ಪಿಕ್ಸೆಲ್‌ ಬಡ್ಸ್‌ A ಸರಣಿಯನ್ನು 6,999 ರೂ.ಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದಾಗಿದೆ.

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ 2K LTPO 2.0 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಮತ್ತು ಓಮ್ನಿ-ಡೈರೆಕ್ಷನಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,800mAh ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೊ ಪವರ್‌ ಫಾಸ್ಟ್ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ.

Most Read Articles
Best Mobiles in India

Read more about:
English summary
realme gt 2 pro, moto edge 30 pro now available with 5000 discount

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X