Home
ಸುದ್ದಿಜಾಲ

ಇಂದು ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌! ಆಫರ್‌ ಏನಿದೆ?

ರಿಯಲ್‌ಮಿ ಕಂಪೆನಿ ಭಾರತದಲ್ಲಿ ಕೆಲ ದಿನಗಳ ಹಿಂದೆ ಹೊಸದಾಗಿ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಭಾರತದಲ್ಲಿ ಇಂದು (ಏಪ್ರಿಲ್ 14) ಮಧ್ಯಾಹ್ನ 12 ಗಂಟೆಗೆ ಈ ಫೋನಿನ ಫಸ್ಟ್‌ ಸೇಲ್‌ ನಡೆಯಲಿದೆ. ಇದು ಫ್ಲಿಪ್‌ಕಾರ್ಟ್, ರಿಯಲ್‌ಮಿ.ಕಾಮ್ ಮತ್ತು ಆಯ್ದ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ.

ರಿಯಲ್‌ಮಿ GT 2 ಪ್ರೊ

ಹೌದು, ಭಾರತದಲ್ಲಿ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಇಂದು (ಏಪ್ರಿಲ್ 14) ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ 2K LTPO 2.0 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 1,440x3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಸ್ಕ್ರೀನ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದೆ, ಇದು ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಟ್ರಿಪಲ್‌ ಕ್ಯಾಮೆರಾ

ಟ್ರಿಪಲ್‌ ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB + 128GB ಸ್ಟೋರೇಜ್ ಮಾದರಿಗೆ 49,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ 12GB + 256GB ಸ್ಟೋರೇಜ್ ಆಯ್ಕೆಗೆ 57,999ರೂ. ಬೆಲೆ ನಿಗಧಿಪಡಿಸಲಾಗಿದೆ. ಇದನ್ನು ಪೇಪರ್ ಗ್ರೀನ್, ಪೇಪರ್ ವೈಟ್ ಮತ್ತು ಸ್ಟೀಲ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಇನ್ನು ಸ್ಮಾರ್ಟ್‌ಫೋನ್ ಅನ್ನು ಇಂದಿನಿಂದ (ಏಪ್ರಿಲ್ 14) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್, ರಿಯಲ್‌ಮಿ.ಕಾಮ್ ಮತ್ತು ಆಯ್ದ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ.

ಆಫರ್‌ ಏನಿದೆ?

ಆಫರ್‌ ಏನಿದೆ?

ರಿಯಲ್‌ಮಿ GT 2 ಪ್ರೊ ಫೋನ್‌ ಖರೀದಿಸುವ ಗ್ರಾಹಕರು 5,000ರೂ.ವರೆಗಿನ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. HDFC ಬ್ಯಾಂಕ್ ಕಾರ್ಡ್‌ಗಳು ಮತ್ತು SBI ಕ್ರೆಡಿಟ್ ಕಾರ್ಡ್‌ಗಳ ಮೂಲಕ ಹ್ಯಾಂಡ್‌ಸೆಟ್ ಖರೀದಿಸುವ ಗ್ರಾಹಕರಿಗೆ ಈ ಆಫರ್‌ ದೊರೆಯಲಿದೆ. ಇದಲ್ಲದೆ ನೋ-ಕಾಸ್ಟ್ ಇಎಂಐ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ. ಜೊತೆಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಗಳಿಗೆ 5% ಕ್ಯಾಶ್‌ಬ್ಯಾಕ್ ನೀಡುತ್ತಿದೆ.

Best Mobiles in India

English summary
Realme GT 2 Pro price in India has been set at Rs. 49,999 for the base 8GB + 128GB storage model.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+