Home
ಸುದ್ದಿಜಾಲ

ರಿಯಲ್‌ಮಿ GT 2 ಮತ್ತು ರಿಯಲ್‌ಮಿ GT 2 ಪ್ರೊ ಬಿಡುಗಡೆ!..50ಎಂಪಿ ಕ್ಯಾಮೆರಾ!

ಸ್ಮಾರ್ಟ್‌ಫೋನ್‌ ವಲಯದಲ್ಲಿ ರಿಯಲ್‌ಮಿ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ GT 2 ಮತ್ತು ರಿಯಲ್‌ಮಿ GT 2 ಪ್ರೊ ಅನ್ನು ಲಾಂಚ್‌ ಮಾಡಿದೆ. ಈ ಎರಡೂ ರಿಯಲ್‌ಮಿ ಫೋನ್‌ಗಳು ತ್ರಿವಳಿ ಕ್ಯಾಮೆರಾ ರಚನೆ ಹಾಗೂ 120Hz ಡಿಸ್‌ಪ್ಲೇಗಳೊಂದಿಗೆ ಬರುತ್ತವೆ.

ರಿಯಲ್‌ಮಿ GT 2 ಮತ್ತು ರಿಯಲ್‌ಮಿ GT 2 ಪ್ರೊ ಬಿಡುಗಡೆ!..50ಎಂಪಿ ಕ್ಯಾಮೆರಾ!

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ GT 2 ಮತ್ತು ರಿಯಲ್‌ಮಿ GT 2 ಪ್ರೊ ಅನ್ನು ಪರಿಚಯಿಸಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿವೆ. ರಿಯಲ್‌ಮಿ GT 2 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದರೆ, ರಿಯಲ್‌ಮಿ GT 2 ಪ್ರೊ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗಾದ್ರೆ ರಿಯಲ್‌ಮಿ GT 2 ಮತ್ತು ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ GT 2 ಮತ್ತು ರಿಯಲ್‌ಮಿ GT 2 ಪ್ರೊ ಬಿಡುಗಡೆ!..50ಎಂಪಿ ಕ್ಯಾಮೆರಾ!

ರಿಯಲ್‌ಮಿ GT 2 ಫೀಚರ್ಸ್‌
ರಿಯಲ್‌ಮಿ GT 2 ಫೋನ್ 6.62 ಇಂಚಿನ ಫುಲ್‌ ಹೆಚ್‌ಡಿ+ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, 1,300 nits ಬ್ರೈಟ್ನೆಸ್‌ ಹೊಂದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ರಿಯಲ್‌ಮಿ GT 2 ಮತ್ತು ರಿಯಲ್‌ಮಿ GT 2 ಪ್ರೊ ಬಿಡುಗಡೆ!..50ಎಂಪಿ ಕ್ಯಾಮೆರಾ!

ರಿಯಲ್‌ಮಿ GT 2 ಪ್ರೊ ಫೀಚರ್ಸ್‌
ರಿಯಲ್‌ಮಿ GT 2 ಪ್ರೊ ಫೋನ್ 6.7 ಇಂಚಿನ 2K ಫುಲ್‌ ಹೆಚ್‌ಡಿ+ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, 1,400 nits ಬ್ರೈಟ್ನೆಸ್‌ ಹೊಂದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ GT 2 ಫೋನ್ ಬೆಲೆ ಬೇಸ್‌ ಮಾಡೆಲ್‌ EUR 549 (ಭಾರತದಲ್ಲಿ ಅಂದಾಜು 46,300ರೂ. ಎನ್ನಲಾಗಿದೆ) ಇನ್ನು ರಿಯಲ್‌ಮಿ GT 2 ಪ್ರೊ ಫೋನ್ ಬೇಸ್ ವೇರಿಯಂಟ್ ಫೋನ್ EUR 749 (ಭಾರತದಲ್ಲಿ ಅಂದಾಜು 63,100ರೂ) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸರಣಿಯು ಪೇಪರ್ ಗ್ರೀನ್, ಪೇಪರ ವೈಟ್ ಹಾಗೂ ಸ್ಟಿಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Realme GT 2, Realme GT 2 Pro With 120Hz Displays Launched: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+