ದೇಶಿ ಮಾರುಕಟ್ಟೆಯಲ್ಲಿ ರಿಯಲ್‌ಮಿ GT 2 ಅನಾವರಣ! ಫೀಚರ್ಸ್ ಹೇಗಿದೆ?
ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಈಗಾಗಲೇ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದ್ದ ರಿಯಲ್‌ಮಿ ಕಂಪೆನಿ ಇದೀಗ ರಿಯಲ್‌ಮಿ GT 2 ಫೋನ್ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ.

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸದಾಗಿ ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.62 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪೇಪರ್ ಗ್ರೀನ್, ಪೇಪರ್ ವೈಟ್ ಮತ್ತು ಸ್ಟೀಲ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಜೊತೆಗೆ 92.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಮತ್ತು ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್ ಬೆಲೆ 34,999 ರೂ,ಆಗಿದೆ. ಆದರೆ 12GB RAM ಮತ್ತು 256GB ಸ್ಟೋರೇಜ್ ಆಯ್ಕೆಯ ಬೆಲೆ 38,999ರೂ, ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪೇಪರ್ ಗ್ರೀನ್, ಪೇಪರ್ ವೈಟ್ ಮತ್ತು ಸ್ಟೀಲ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಲಾಂಚ್ ಆಫರ್‌ನಲ್ಲಿ ನೀವು HDFC ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬಳಸಿ ಖರೀದಿಸಿದರೆ 5,000ರೂ.ವರೆಗೆ ರಿಯಾಯಿತಿ ಪಡೆಯಬಹುದಾಗಿದೆ.


Click it and Unblock the Notifications








