ಬಹುನಿರೀಕ್ಷಿತ ರಿಯಲ್‌ಮಿ GT 3 ಲಾಂಚ್‌ಗೆ ಮುಹೂರ್ತ ಫಿಕ್ಸ್!..240W ವೇಗದ ಚಾರ್ಜಿಂಗ್!
ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸದ್ಯ ಇದೀಗ ಅತ್ಯಂತ ವೇಗದ ಚಾರ್ಜಿಂಗ್ ಮೊಬೈಲ್ ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲು ಮುಂದಾಗಿದೆ. ಇದನ್ನು ರಿಯಲ್‌ಮಿ GT 3 ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ನ ಬಿಡುಗಡೆ ದಿನಾಂಕವನ್ನು ರಿಯಲ್‌ಮಿ ಕಂಪೆನಿ ಅಧಿಕೃತವಾಗಿ ಘೋಷಣೆ ಮಾಡಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 28 ರಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಹೌದು, ರಿಯಲ್‌ಮಿ GT 3 ಸ್ಮಾರ್ಟ್‌ಫೋನ್ ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2023 ಈವೆಂಟ್‌ನಲ್ಲಿ ಅನಾವರಣಗೊಳ್ಳಲಿದೆ. ಇದನ್ನು ಭಾರತೀಯ ಕಾಲಮಾನ ಫೆಬ್ರವರಿ 28 ರ 4:00 PM ಸಮಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ರಿಯಲ್‌ಮಿ ಹೇಳಿದೆ. ಇದೇ ಸಮಯದಲ್ಲಿಯೇ ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಲಿದೆಯಾ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ರಿಯಲ್‌ಮಿ GT 3 ಡಿಸ್‌ಪ್ಲೇ ವಿನ್ಯಾಸ
ರಿಯಲ್‌ಮಿ GT 3 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಹೊಂದಿರುಲಿದೆ ಎಂದು ವರದಿಯಾಗಿದೆ. ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆಯಿದೆ. ಇನ್ನು ಡಿಸ್‌ಪ್ಲೇ 20.1:9 ರಚನೆಯ ಅನುಪಾತವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಹಾಗೆಯೇ ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ಅನುಪಾತ 87.79 % ಇರಲಿದೆ ಅನ್ನೊದು ಬಹಿರಂಗವಾಗಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಸ್ಕ್ರೀನ್ ಪ್ರೊಟೆಕ್ಷನ್ ಅನ್ನು ಪಡೆದಿರಲಿದೆ.

ರಿಯಲ್‌ಮಿ GT 3 ಪ್ರೊಸೆಸರ್ ಯಾವುದು?
ರಿಯಲ್‌ಮಿ GT 3 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೊನ್ ಮೆಮೊರಿ ಕಾರ್ಡ್ ಬೆಂಬಲಿಸುವುದಿಲ್ಲ ಎಂದು ಹೇಳಲಾಗಿದೆ. ಆದರೆ ಯುಎಸ್‌ಬಿ ಒಟಿಜಿಯನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ.
ರಿಯಲ್‌ಮಿ GT 3 ಕ್ಯಾಮೆರಾ ಸೆಟ್‌ಅಪ್ ಯಾವುದು?
ರಿಯಲ್‌ಮಿ GT 3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ ಎಂದು ಅಂದಾಜಿಸಲಾಗಿದೆ.

ರಿಯಲ್‌ಮಿ GT 3 ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ರಿಯಲ್‌ಮಿ GT 3 ಸ್ಮಾರ್ಟ್‌ಫೋನ್ 240W ವೇಗದ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ರಿಯಲ್‌ಮಿ GT 3 ಲಭ್ಯತೆ ಯಾವಾಗ?
ರಿಯಲ್‌ಮಿ GT 3 ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಇದೇ ಫೆಬ್ರವರಿ 28 ರಂದು ಅನಾವರಣಗೊಳ್ಳಲಿದೆ. ಆದರೆ ಇದರ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಜೊತೆಗೆ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಕೂಡ ಅಂದೇ ಬಿಡುಗಡೆಯಾಗಲಿದೆಯಾ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.


Click it and Unblock the Notifications








