ರಿಯಲ್‌ಮಿ GT5 ಪ್ರೊ ಫೋನಿನ ಕ್ಯಾಮೆರಾ ಫೀಚರ್ಸ್ ಲೀಕ್..ಅಬ್ಬಬ್ಬಾ ಎಂದ ಗ್ರಾಹಕ!
ರಿಯಲ್‌ಮಿ ಮೊಬೈಲ್ ಕಂಪನಿಯ ಬಹುನಿರೀಕ್ಷಿತ ಫೋನ್‌ಗಳ ರಿಯಲ್‌ಮಿ GT5 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಫೋನಿನ ಲೀಕ ಫೀಚರ್ಸ್‌ಗಳು ಈಗಾಗಲೇ ಗ್ರಾಹಕರನ್ನು ಆಕರ್ಷಿಸಿದ್ದು, ಇದೀಗ ಕ್ಯಾಮೆರಾ ಫೀಚರ್ಸ್ ಬಗ್ಗೆ ಮತ್ತಷ್ಟು ಮಾಹಿತಿ ಸೋರಿಕೆ ಆಗಿದೆ.
ಹೌದು, ಮುಂಬರುವ ಹೊಸ ರಿಯಲ್‌ಮಿ GT5 ಪ್ರೊ ಮೊಬೈಲ್ ಗ್ರಾಹಕರಲ್ಲಿ ಕುತೂಹಲ ಹೆಚ್ಚಿಸಿದೆ. ಬಹುತೇಕ ಈ ವರ್ಷದ ಕೊನೆಯಲ್ಲಿ ಲಾಂಚ್ ಆಗುವ ಸಾಧ್ಯತೆಗಳು ಅಧಿಕ ಆಗಿವೆ. ಈ ಫೋನ್ Sony Lytia LYT808 ಮುಖ್ಯ ಶೂಟರ್, 50 ಮೆಗಾ ಪಿಕ್ಸಲ್ IMX890 ಟೆಲಿಫೋಟೋ ಸೆನ್ಸಾರ್ ಹೊಂದಿರುವುದು ಬಹುತೇಕ ಖಚಿತ ಎನ್ನಲಾಗುತ್ತದೆ. ಇನ್ನುಳಿದಂತೆ ಈ ಫೋನಿನ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ GT5 ಪ್ರೊ ಫೀಚರ್ಸ್ ಮಾಹಿತಿ
ರಿಯಲ್‌ಮಿ GT5 ಪ್ರೊ ಮೊಬೈಲ್ 6.7 ಇಂಚಿನ 1.5K ಓಎಲ್‌ಇಡಿ ಮಾದರಿಯ ಡಿಸ್‌ಪ್ಲೇ ಪಡೆದಿರಲಿದ್ದು, 144 Hz ರಿಫ್ರೆಶ್ ರೇಟ್, 1200 ನಿಟ್ಸ್ ಬ್ರೈಟ್‌ನೆಸ್ ಆಯ್ಕೆ ಹಾಗೂ 240 Hz ಟಚ್ ಸ್ಯಾಂಪ್ಲಿಂಗ್ ರೇಟ್ ಆಯ್ಕೆ ಪಡೆದಿರಲಿದೆ.
ಅಲ್ಲದೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜನ್ 3 ಪ್ರೊಸೆಸರ್ ಪವರ್ ಪಡೆದುಕೊಂಡಿರಲಿದ್ದು, ಮಲ್ಟಿಟಾಸ್ಕ್ ಕೆಲಸಗಳಿಗೆ, ಅಧಿಕ ಡೇಟಾದ ಗೇಮಿಂಗ್, ವಿಡಿಯೋ ಎಡಿಟಿಂಗ್ ನಂತಹ ಕೆಲಸಗಳುಗೆ ಪೂರಕವಾಗಿ ಕೆಲಸ ಮಾಡಲಿದೆ ಎನ್ನಲಾಗಿದೆ. ಇದರ ಜೊತೆಗೆ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್ ಸಪೋರ್ಟ್ ಪಡೆದಿರುವುದು ಖಚಿತ ಎನ್ನಲಾಗಿದೆ.

ಇನ್ನು ಈ ಫೋನ್ 12 GB + 16 GB RAM ಆಯ್ಕೆಯ ಜೊತೆಗೆ 256 GB ಹಾಗೂ 512 GB ಸ್ಟೋರೇಜ್ ವೇರಿಯಂಟ್‌ನಲ್ಲಿ ಎಂಟ್ರಿ ಕೊಡುವ ಸಾಧ್ಯತೆಗಳು ಇವೆ. ಅದಾಗ್ಯೂ 24GB RAM ಆಯ್ಕೆ ಕೂಡಾ ಮಾರುಕಟ್ಟೆಗೆ ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿದೆ. ಆದರೆ ಸ್ಪಷ್ಟ ಮಾಹಿತಿ ಕಂಪನಿಯಿಂದ ಹೊರಹಾಕಿಲ್ಲ.
ಇನ್ನು ರಿಯಲ್‌ಮಿ GT5 ಪ್ರೊ ಸ್ಮಾರ್ಟ್‌ಫೋನ್ ಪ್ರಮುಖ ನಿರೀಕ್ಷೆಗಳಲ್ಲಿ ಕ್ಯಾಮೆರಾ ಆಯ್ಕೆ ಸಹ ಒಂದಾಗಿದೆ. ಇದು ಸೋನಿ Lytia LYT808 ಪ್ರಾಥಮಿಕ ಶೂಟರ್, 50 ಮೆಗಾ ಪಿಕ್ಸಲ್ IMX890 ಟೆಲಿಫೋಟೋ ಸೆನ್ಸಾರ್ ಹೊಂದಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿರಲಿದ್ದು, OmniVision OV08D10 ಅಲ್ಟ್ರಾವೈಡ್ ಸೆನ್ಸಾರ್ ಪಡೆದಿರಲಿದೆ.

ಅಂದಾಹಾಗೆ ಈ ಮೊಬೈಲ್ 32 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಒಳಗೊಂಡಿರುವ ಸಾಧ್ಯತೆಗಳು ಅಧಿಕ ಆಗಿವೆ. ಅಲ್ಲದೇ ಈ ಮೊಬೈಲ್ 5400mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿರಲಿದೆ ಎಂದು ಹೇಳಲಾಗಿದ್ದು, 100W ಸೂಪರ್‌ವೂಕ್ ಚಾರ್ಜಿಂಗ್ ಸಪೋರ್ಟ್ ಮಾಡುವ ನಿರೀಕ್ಷೆಗಳು ಇವೆ.
ರಿಯಲ್‌ಮಿ GT 5G ಸ್ಮಾರ್ಟ್‌ಫೋನ್ ಫೀಚರ್ಸ್ ಹೀಗಿವೆ
ರಿಯಲ್‌ಮಿ GT 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಫೋನ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದರೊಂದಿಗೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಆಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದ್ದು, ಇದು 65W ಸೂಪರ್‌ಡಾರ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








