Home
ಸುದ್ದಿಜಾಲ

ರಿಯಲ್‌ಮಿ GT 5 ಪ್ರೊ ಲಾಂಚ್‌ ಡೇಟ್‌ ಬಹಿರಂಗ!..ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ ವಿಶೇಷ!

ಬಹು ನಿರೀಕ್ಷಿತ ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಯುವಜನರನ್ನೇ ಗುರಿಯಾಗಿರಿಸಿಕೊಂಡಿರುವ ರಿಯಲ್‌ಮಿ, ತನ್ನ GT 5 ಪ್ರೊ ಮೂಲಕ ಹೊಸ ಬದಲಾವಣೆಗೆ ನಾಂದಿ ಹಾಡುವ ಸೂಚನೆ ನೀಡಿದೆ. ಈ ಫೋನ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.

ಹೌದು, ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಡಿಸೆಂಬರ್‌ 7ಕ್ಕೆ ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಮೊದಲಿಗೆ ಗ್ಲೋಬಲ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿದ್ದು, ನಂತರದ ದಿನಗಳಲ್ಲಿ ಭಾರತಕ್ಕೆ ಸಹ ಬರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ GT 5 ಪ್ರೊ ಲಾಂಚ್‌ ಡೇಟ್‌ ಬಹಿರಂಗ!..ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ

ರಿಯಲ್‌ಮಿ GT 5 ಪ್ರೊ ಡಿಸ್‌ಪ್ಲೇ ರಚನೆ ಹೇಗಿದೆ?
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯೊಂದಿಗೆ ಬರುವ ನಿರೀಕ್ಷೆಯಿದೆ. ಇನ್ನು ಡಿಸ್‌ಪ್ಲೇ 1264 x 2780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ನಲ್ಲಿ ಬರಲಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತ ಹೊಂದಿರಲಿದ್ದು, 91.45 % ಸ್ಕ್ರೀನ್‌ ಟು ಬಾಡಿ ಅನುಪಾತದಲ್ಲಿರಲಿದೆ. ಇದಲ್ಲದೆ ಡಿಸ್‌ಪ್ಲೇ 450 ಪಿಪಿಐ ಪಿಕ್ಸೆಲ್‌ ಸಾಂದ್ರತೆಯಲ್ಲಿರಲಿದೆ.

ರಿಯಲ್‌ಮಿ GT 5 ಪ್ರೊ ಪ್ರೊಸೆಸರ್‌ ನಿರೀಕ್ಷೆ ಏನು?
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ 1TB ವರೆಗೆ ಅಂತರ್ಗತ ಸಂಗ್ರಹಣೆಯನ್ನು ನೀಡುತ್ತದೆ ಎನ್ನಲಾಗಿದೆ.

ರಿಯಲ್‌ಮಿ GT 5 ಪ್ರೊ ಲಾಂಚ್‌ ಡೇಟ್‌ ಬಹಿರಂಗ!..ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ

ರಿಯಲ್‌ಮಿ GT 5 ಪ್ರೊ ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ವೈಡ್ ಆಂಗಲ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ರಿಯಲ್‌ಮಿ GT 5 ಪ್ರೊ ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 5,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ವೈರ್ಡ್ ಮತ್ತು 50W ವಾಯರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ನೊಂದಿಗೆ ಬರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಲೈಟ್‌ ಸೆನ್ಸಾರ್‌, ಕಂಪಾಸ್‌, ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ರಿಯಲ್‌ಮಿ GT 5 ಪ್ರೊ ಲಾಂಚ್‌ ಡೇಟ್‌ ಬಹಿರಂಗ!..ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ

ರಿಯಲ್‌ಮಿ GT 5 ಪ್ರೊ ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಇದೇ ಡಿಸೆಂಬರ್‌ 7ಕ್ಕೆ ಬಿಡುಗಡೆ ಆಗಲಿದೆ. ಇದರ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಮೊದಲಿಗೆ ಇದು ಚೀನಾದಲ್ಲಿ ಎಂಟ್ರಿ ನೀಡುವುದು ಕನ್ಫರ್ಮ್‌ ಆಗಿದೆ. ಚೀನಾದಲ್ಲಿ ಈ ಸ್ಮಾರ್ಟ್‌ಫೋನ್‌ ಫ್ಲೋಯಿಂಗ್ ಸಿಲ್ವರ್ ಇಲ್ಯೂಷನ್ ಮಿರರ್ ಮತ್ತು ಸ್ಟಾರ್ರಿ ಓಯಸಿಸ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Realme GT 5 Pro Launch date Set for December 7: Periscope Telephoto Camera
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+