Home
ಸುದ್ದಿಜಾಲ

Realme: ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌!..100W ವೈರ್ಡ್ ಫಾಸ್ಟ್ ಚಾರ್ಜಿಂಗ್!

ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಮೂಲಕ ಟೆಕ್‌ ವಲಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಈ ಸ್ಮಾರ್ಟ್‌ಫೋನ್‌ ಉನ್ನತ ದರ್ಜೆಯ ಫೀಚರ್ಸ್‌ ಹಾಗೂ ಪ್ಯಾನಲ್‌ ಡಿಸೈನ್‌ನಿಂದ ಧೂಳೆಬ್ಬಿಸುವ ಸೂಚನೆ ನೀಡಿದೆ. ಇದು ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌!.100W ವೈರ್ಡ್ ಫಾಸ್ಟ್ ಚಾರ್ಜಿಂಗ್

ರಿಯಲ್‌ಮಿ GT 5 ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ 8T LTPO 1.5K OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಅಡಾಪ್ಟಿವ್ 144Hz ರಿಫ್ರೆಶ್ ರೇಟ್, 2160Hz PWM ಡಿಮ್ಮಿಂಗ್‌, 2160Hz ಟಚ್ ಸ್ಯಾಂಪ್ಲಿಂಗ್ ರೇಟಿಂಗ್‌, DC ಡಿಮ್ಮಿಂಗ್, 20,000 ಲೆವೆಲ್ ಡಿಮ್ಮಿಂಗ್, Pro-XD00 ಟೆಕ್ನಾಲಜಿ ಗ್ಲೋಬಲ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದಲ್ಲದೆ 4,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಸೆಲ್ಫಿ ಕ್ಯಾಮೆರಾಕ್ಕಾಗಿ ಪಂಚ್-ಹೋಲ್ ಕಟೌಟ್ ಅನ್ನು ಸಹ ಹೊಂದಿದೆ.

ರಿಯಲ್‌ಮಿ GT 5 ಪ್ರೊ ಪ್ರೊಸೆಸರ್‌ ಯಾವುದು?
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 OS ಆಧಾರಿತ ರಿಯಲ್‌ಮಿ UI 5.0 ಕಸ್ಟಮ್ ಸ್ಕಿನ್‌ನಿಂದ ರನ್‌ ಆಗಲಿದೆ. ಇದು ಟಾಪ್ ಎಂಡ್ ಪ್ರೊಸೆಸರ್ ಆಗಿರುವುದರಿಂದ ದೈನಂದಿನ ಬಳಕೆ ಮತ್ತು ನಿರ್ದಿಷ್ಟವಾಗಿ ಗೇಮಿಂಗ್‌ನಲ್ಲಿ ಉತ್ತಮ ಕಾರ್ಯಕ್ಷಮತೆ ನೀಡಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌!.100W ವೈರ್ಡ್ ಫಾಸ್ಟ್ ಚಾರ್ಜಿಂಗ್

ರಿಯಲ್‌ಮಿ GT 5 ಪ್ರೊ ಕ್ಯಾಮೆರಾ ಸೆಟಪ್‌ ಏನಿದೆ?
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Sony LYT-808 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ Sony IMX890 ಪೆರಿಸ್ಕೋಪಿಕ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್‌ ಪಡೆದುಕೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರಿಯಲ್‌ಮಿ GT 5 ಪ್ರೊ ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 5,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇನ್ನು ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, VC ಕೂಲಿಂಗ್ ಸಿಸ್ಟಮ್, USB 3.2 ಸಕ್ರಿಯಗೊಳಿಸಿದ USB-C ಪೋರ್ಟ್ ಮತ್ತು AI ಸೂಪರ್ ಅಸಿಸ್ಟೆಂಟ್ ಆನ್‌ಬೋರ್ಡ್ ಅನ್ನು ಬೆಂಬಲಿಸುತ್ತದೆ.

ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌!.100W ವೈರ್ಡ್ ಫಾಸ್ಟ್ ಚಾರ್ಜಿಂಗ್

ರಿಯಲ್‌ಮಿ GT 5 ಪ್ರೊ ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 12GB+256GB ಸ್ಟೋರೇಜ್‌ ಆಯ್ಕೆಗೆ ಚೀನಾದಲ್ಲಿ 3399 ಯುವಾನ್ (ಅಂದಾಜು 39,860ರೂ )ಬೆಲೆಯನ್ನು ಹೊಂದಿದೆ
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 16GB+256GB ಸ್ಟೋರೇಜ್‌ ಆಯ್ಕೆಯು ಚೀನಾದಲ್ಲಿ 3699 ಯುವಾನ್ (ಅಂದಾಜು 43,380ರೂ) ಬೆಲೆಯನ್ನು ಹೊಂದಿದೆ.
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 16GB+512GB ಸ್ಟೋರೇಜ್‌ ಆಯ್ಕೆಯು ಚೀನಾದಲ್ಲಿ 3999 ಯುವಾನ್ (ಅಂದಾಜು 46,910ರೂ) ಬೆಲೆಯನ್ನು ಹೊಂದಿದೆ.
ರಿಯಲ್‌ಮಿ GT 5 ಪ್ರೊ ಸ್ಮಾರ್ಟ್‌ಫೋನ್‌ 16GB+1TB ಸ್ಟೋರೇಜ್‌ ಆಯ್ಕೆಯು ಚೀನಾದಲ್ಲಿ 4299 ಯುವಾನ್ (ಅಂದಾಜು 50,430ರೂ) ಬೆಲೆಯನ್ನು ಹೊಂದಿದೆ.

Best Mobiles in India

English summary
Realme GT 5 Pro with 50MP Sony LYT-808 main camera launched: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+