ರಿಯಲ್‌ಮಿ GT ಸ್ಮಾರ್ಟ್‌ಫೋನ್‌ ಬೆಲೆ ಕಡಿತ!..ಷರತ್ತುಗಳು ಅನ್ವಯ!

|

ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಇದರಲ್ಲಿ ರಿಯಲ್‌ಮಿ GT ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಕಳೆದ ವರ್ಷ ಭಾರತದಲ್ಲಿ ಬಿಡುಗಡೆ ಆಗಿದ್ದ ಈ ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್‌ಪ್ರಿಯರ ಗಮನ ಸೆಳೆದಿತ್ತು. ಸದ್ಯ ಇದೀಗ ರಿಯಲ್‌ಮಿ GT 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. 37,999ರೂ. ಮೂಲಬೆಲೆಯಲ್ಲಿ ಬಿಡುಗಡೆ ಆಗಿದ್ದ ಈ ಫೋನ್‌ ನಿಮಗೆ ಆಕರ್ಷಕ ಆಫರ್‌ನಲ್ಲಿ ದೊರೆಯಲಿದೆ.

ರಿಯಲ್‌ಮಿ GT

ಹೌದು, ರಿಯಲ್‌ಮಿ ಕಂಪೆನಿಯ ರಿಯಲ್‌ಮಿ GT ಫ್ಲಿಪ್‌ಕಾರ್ಟ್‌ ಬೆಲೆ ಇಳಿಕೆಯನ್ನು ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರು 2,000ರೂ.ಗಳವರೆಗೆ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಈ ಫೋನ್‌ ಲಾಂಚ್‌ ಆಗಿ ಕೆಲವೇ ತಿಂಗಳುಗಳು ಮಾತ್ರ ಕಳೆದಿವೆ. ಇದೇ ಕಾರಣಕ್ಕೆ ಈ ಫೋನ್‌ನ ಅಧಿಕೃತ ಬೆಲೆ 37,999ರೂ ಆಗಿದೆ. ಆದರೆ ನೀವು ಕೆಲವು ಮಾನದಂಡಗಳನ್ನು ಪೂರೈಸಿದರೆ ಫ್ಲಿಪ್‌ಕಾರ್ಟ್‌ನಲ್ಲಿ ಕಡಿಮೆ ಬೆಲೆಗೆ ಈ ಫೋನ್‌ ಖರೀದಿಸಬಹುದಾಗಿದೆ. ಹಾಗಾದ್ರೆ ರಿಯಲ್‌ಮಿ GT ಫೋನ್‌ ಅನ್ನು ಡಿಸ್ಕೌಂಟ್‌ನಲ್ಲಿ ಖರೀದಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ GT

ರಿಯಲ್‌ಮಿ GT ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಡಿಸ್ಕೌಂಟ್‌ ಪಡೆದುಕೊಂಡಿದೆ ನಿಜ. ಆದರೆ ಇದಕ್ಕಾಗಿ ಕೆಲವು ಷರತ್ತುಗಳು ಅನ್ವಯವಾಗಲಿದೆ. ನೀವು ಆನ್‌ಲೈನ್ ಪಾವತಿಗಳನ್ನು ಆರಿಸಿಕೊಂಡರೆ ಮಾತ್ರ ಫ್ಲಿಪ್‌ಕಾರ್ಟ್‌ ಈ ಫೋನ್‌ ಮೇಲೆ 2,000 ರೂ.ಗಳ ರಿಯಾಯಿತಿ ನೀಡಲಿದೆ. ಅಂದರೆ ಫ್ಲಿಪ್‌ಕಾರ್ಟ್‌ನಲ್ಲಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಅಥವಾ UPI ಮೂಲಕ ಪಾವತಿಯನ್ನು ಮಾಡಿದರೆ ಬೆಲೆ ಕಡಿಮೆ ಆಗಲಿದೆ. ನೀವು 2,000ರೂ. ರಿಯಾಯಿತಿ ಆಫರ್ ಪಡೆಯಬೇಕೆಂದುಕೊಂಡರೆ ಆಕ್ಸಿಸ್ ಬ್ಯಾಂಕ್, ಸಿಟಿ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್‌ಗಳು, ಇಂಡಸ್‌ಇಂಡ್ ಬ್ಯಾಂಕ್, ಕೋಟಕ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಫೆಡರಲ್ ಬ್ಯಾಂಕ್, ಡಿಬಿಎಸ್ ಬ್ಯಾಂಕ್, ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್, ಯೆಸ್ ಬ್ಯಾಂಕ್ , HSBC ಬ್ಯಾಂಕ್, RBL ಬ್ಯಾಂಕ್, ಅಮೇರಿಕನ್ ಎಕ್ಸ್‌ಪ್ರೆಸ್, IDFC ಫಸ್ಟ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಕಾರ್ಡ್‌ಗಳಲ್ಲಿ ಮಾತ್ರ ಆಫರ್‌ ಸಿಗಲಿದೆ. ಅದು ಅಲ್ಲದೆ ಈ ಆಫರ್ ನಾಳೆಯೆ ಕೊನೆಗೊಳ್ಳಲಿದೆ. ಇನ್ನು ಈ ಫೋನಿನ ವಿಶೇಷತೆಯ ಬಗ್ಗೆ ಕೆಳಗಿನ ಹಂತಗಳಲ್ಲಿ ತಿಳಿಯಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರಿಯಲ್‌ಮಿ GT 6.43 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಹೊಂದಿದ್ದು, ಮೇಲಿನ ಎಡ ಮೂಲೆಯಲ್ಲಿ ಪಂಚ್-ಹೋಲ್ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ GT ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

Best Mobiles in India

English summary
The Realme GT 5G is currently available for a discount of Rs 2,000.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X