Home
ಸುದ್ದಿಜಾಲ

ರಿಯಲ್‌ಮಿ GT 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಏನು?

ರಿಯಲ್‌ಮಿ ಕಂಪೆನಿ ಬಹು ನಿರೀಕ್ಷಿತ ರಿಯಲ್‌ಮಿ GT 5G ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಲಾಂಚ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಟೇನ್‌ಲೆಸ್ ಸ್ಟೀಲ್-ನಿರ್ಮಿತ ಏರ್‌ ಕೂಲಿಂಗ್ ಸಿಸ್ಟಮ್‌ ಫೀಚರ್ಸ್‌ ಅನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 8GB ಅಥವಾ 12GB RAM ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

ರಿಯಲ್‌ಮಿ GT 5G

ಹೌದು, ರಿಯಲ್‌ಮಿ ಕಂಪನಿ ಹೊಸ ರಿಯಲ್‌ಮಿ GT 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು 120Hz AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಡಾಲ್ಬಿ ಅಟ್ಮೋಸ್ ಆಡಿಯೊ ಫೀಚರ್ಸ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರಿಯಲ್‌ಮಿ GT 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 91.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ಮಿ GT 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 682 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ವೈಡ್‌ ಆಂಗಲ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಸೂಪರ್‌ಡಾರ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಚಾರ್ಜಿಂಗ್ ತಂತ್ರಜ್ಞಾನವು 35 ನಿಮಿಷಗಳಲ್ಲಿ ಅಂತರ್ನಿರ್ಮಿತ ಬ್ಯಾಟರಿಯನ್ನು ಶೂನ್ಯದಿಂದ 100 ಪ್ರತಿಶತದವರೆಗೆ ಚಾರ್ಜ್ ಮಾಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ 6, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ GT 5G 8GB RAM + 128GB ಇಂಟರ್‌ ಸ್ಟೋರೇಜ್‌ ಆಯ್ಕೆಯ ಬೆಲೆ ಯುರೋ 449 (ಸರಿಸುಮಾರು 32,900ರೂ,)ಗೆ ನಿಗದಿಪಡಿಸಲಾಗಿದೆ. ಇನ್ನು ಈ ಫೋನ್ 12GB RAM + 256GB ಇಂಟರ್‌ ಸ್ಟೋರೇಜ್ ಆಯ್ಕೆಗೆ ಯುರೋ 599 (ಅಂದಾಜು 53,200ರೂ,) ಬೆಲೆಯನ್ನು ಹೊಂದಿದೆ. ಸದ್ಯ ರಿಯಲ್‌ಮಿ GT 5G ಪೋಲೆಂಡ್, ರಷ್ಯಾ, ಸ್ಪೇನ್ ಮತ್ತು ಥೈಲ್ಯಾಂಡ್ ಸೇರಿದಂತೆ ಆಯ್ದ ದೇಶಗಳಲ್ಲಿ ಮಾರಾಟವಾಗಲಿದೆ. ಇದು ಡ್ಯಾಶಿಂಗ್ ಬ್ಲೂ, ಡ್ಯಾಶಿಂಗ್ ಸಿಲ್ವರ್ ಮತ್ತು ರೇಸಿಂಗ್ ಹಳದಿ ಬಣ್ಣಗಳಲ್ಲಿ ಲಭ್ಯವಿರುತ್ತದೆ. ಭಾರತದಲ್ಲಿ ರಿಯಲ್‌ಮಿ GT 5G ಬಿಡುಗಡೆಯ ಬಗ್ಗೆ ವಿವರಗಳನ್ನು ಇನ್ನೂ ಪ್ರಕಟಿಸಲಾಗಿಲ್ಲ.

Best Mobiles in India

English summary
Realme GT 5G was launched globally in a virtual conference on Tuesday. The new Realme phone comes with a Qualcomm Snapdragon 888 SoC, 8GB or 12GB RAM variants.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+