Home
ಸುದ್ದಿಜಾಲ

ಲಾಂಚ್‌ ಆಯ್ತು ರಿಯಲ್‌ಮಿ GT 6T ಫೋನ್‌; ಇದರ ಫೀಚರ್ಸ್‌ಗೆ ಗ್ರಾಹಕರು ಫಿದಾ!

ರಿಯಲ್‌ಮಿ ಸಂಸ್ಥೆಯು ನೂತನವಾಗಿ ರಿಯಲ್‌ಮಿ GT 6T ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಫೋನ್‌ ಸ್ಟೈಲಿಶ್‌ ಡಿಸೈನ್‌ ಪಡೆದುಕೊಂಡಿದ್ದು, ಇದರ ಜೊತೆಗೆ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್ 7+ ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಹೊಂದಿದೆ.

ಹೌದು, ರಿಯಲ್‌ಮಿ ಸಂಸ್ಥೆಯು ರಿಯಲ್‌ಮಿ GT 6T ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನ್‌ 5,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿದ್ದು, ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು 6,000 nits ಬ್ರೈಟ್ನೆಸ್‌ ಅನ್ನು ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌ ಆಗಿ ಕಾಣಿಸಿಕೊಂಡಿದೆ.

ಲಾಂಚ್‌ ಆಯ್ತು ರಿಯಲ್‌ಮಿ GT 6T ಫೋನ್‌; ಇದರ ಫೀಚರ್ಸ್‌ಗೆ ಗ್ರಾಹಕರು ಫಿದಾ!

ಹಾಗೆಯೇ ಈ ನೂತನ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ GT 6T ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ GT 6T ಫೀಚರ್ಸ್

ರಿಯಲ್‌ಮಿ GT 6T ಮೊಬೈಲ್‌ 6.78 ಇಂಚಿನ 3D LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2,789 x 1,264 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 6000 nits ಪೀಕ್ ಬ್ರೈಟ್ನೆಸ್‌, 120Hz ರಿಫ್ರೆಶ್‌ ರೇಟ್‌ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್‌ ವಿಕ್ಟಸ್‌ ಪ್ರೊಟೆಕ್ಷನ್‌ ಸೌಲಭ್ಯ ಸಹ ಕಾಣಬಹುದಾಗಿದೆ

ರಿಯಲ್‌ಮಿ GT 6T ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್ 7+ ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ. ಅಲ್ಲದೇ ಈ ಫೋನ್‌ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಜೊತೆಗೆ Adreno 732 GPU ಸಪೋರ್ಟ್‌ ಸಹ ಇದೆ.

ರಿಯಲ್‌ಮಿ GT 6T ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸೌಲಭ್ಯ ಒಳಗೊಂಡಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ.

ರಿಯಲ್‌ಮಿ GT 6T ಫೋನ್‌ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡಾ ಲಭ್ಯ.

ಬೆಲೆ ಮಾಹಿತಿ ಇಲ್ಲಿದೆ

8GB + 128GB ವೇರಿಯಂಟ್‌ ಬೆಲೆ 30,999ರೂ. ಆಗಿದೆ
8GB + 256GB ವೇರಿಯಂಟ್‌ ಬೆಲೆ 32,999ರೂ. ಆಗಿದೆ
12GB + 256GB ವೇರಿಯಂಟ್‌ ಬೆಲೆ 35,999ರೂ. ಆಗಿದೆ
12GB + 512GB ವೇರಿಯಂಟ್‌ ಬೆಲೆ 39,999ರೂ. ಆಗಿದೆ

ಬ್ಯಾಂಕ್‌ ಆಫರ್‌ ಬೆಲೆ ಹೀಗಿದೆ

8GB + 128GB ವೇರಿಯಂಟ್‌ ಬೆಲೆ 24,999ರೂ. ಆಗಿದೆ
8GB + 256GB ವೇರಿಯಂಟ್‌ ಬೆಲೆ 26,999ರೂ. ಆಗಿದೆ
12GB + 256GB ವೇರಿಯಂಟ್‌ ಬೆಲೆ 29999ರೂ. ಆಗಿದೆ
12GB + 512GB ವೇರಿಯಂಟ್‌ ಬೆಲೆ 33999ರೂ. ಆಗಿದೆ

ಇನ್ನು ರಿಯಲ್‌ಮಿ GT 6T ಫೋನ್‌ ಇದೇ ಮೇ 29 ರಂದು ಮಧ್ಯಾಹ್ನ 12 ಗಂಟೆಗೆ ಅಮೆಜಾನ್‌ ಇ ಕಾಮರ್ಸ್‌ ತಾಣ ಹಾಗೂ ರಿಯಲ್‌ಮಿ ವೆಬ್‌ಸೈಟ್‌ ಮೂಲಕ ಫಸ್ಟ್‌ ಸೇಲ್‌ ಪ್ರಾರಂಭ ಮಾಡಲಿದೆ. ಇನ್ನು ಈ ಫೋನ್‌ ರೇಜರ್‌ ಗ್ರೀನ್‌ ಹಾಗೂ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Realme GT 6T with 5,500 mAh battery launched in India. check Price, offers price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+