3000 ಡಿಸ್ಕೌಂಟ್! 512GB ಸ್ಟೋರೇಜ್.. 5800mAh ಬ್ಯಾಟರಿ.. ಇಂದು Realme GT 7 Pro ಸೇಲ್
ರಿಯಲ್‌ಮಿ ಮೊಬೈಲ್‌ಗಳಿಗೆ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಕಂಪನಿಯು, ಇತ್ತೀಚೆಗೆ ಹೊಸ ರಿಯಲ್‌ಮಿ GT7 ಪ್ರೊ (Realme GT7 Pro) ಫೋನನ್ನು ಬಿಡುಗಡೆ ಮಾಡಿದೆ. ಅಂದಹಾಗೆ, ಈ ಮೊಬೈಲ್ ಇಂದು (ನ.29) ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಕಂಪನಿಯು, ಮುಂಗಡ ಬುಕಿಂಗ್ ಮಾಡುವ ಗ್ರಾಹಕರಿಗೆ ಕೆಲವು ಆಫರ್‌ಗಳನ್ನು ಘೋಷಿಸಿದೆ. ಜೊತೆಗೆ, 3000 ರೂ. ರಿಯಾಯಿತಿ ನೀಡುತ್ತಿದೆ. ನೀವು, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ ಇದನ್ನು ಖರೀದಿಸಬಹುದು. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಕಂಪನಿಯು ರಿಯಲ್‌ಮಿ GT7 ಪ್ರೊ ಅನ್ನು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಇದು ಮಾರ್ಸ್ ಆರೆಂಜ್ ಮತ್ತು ಗ್ಯಾಲಕ್ಸಿ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು 6.78 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದರೊಂದಿಗೆ 512GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳು ಲಭ್ಯವಿದೆ.

ರಿಯಲ್‌ಮಿ GT7 ಪ್ರೊ ಬೆಲೆ ಮತ್ತು ಆಫರ್‌ಗಳು
12GB RAM + 256GB ಸ್ಟೋರೇಜ್ ಬೆಲೆ = 59,999 ರೂ.
16GB RAM + 512GB ಸ್ಟೋರೇಜ್ ಬೆಲೆ = 65,999 ರೂ.
ರಿಯಲ್‌ಮಿ GT7 ಪ್ರೊ ಫೋನಿನ 12GB RAM + 256GB ಸ್ಟೋರೇಜ್ ಆಯ್ಕೆಯು 59,999 ರೂ.ಗೆ ಮಾರಾಟವಾಗಲಿದೆ. 16GB RAM + 512GB ಸ್ಟೋರೇಜ್ ರೂಪಾಂತರವು 65,999 ರೂ.ಗೆ ಲಭ್ಯವಿದೆ. ಕಂಪನಿಯು, ಮೊದಲ ಮಾರಾಟದ ಪ್ರಯುಕ್ತ 3,000 ರೂ. ಬ್ಯಾಂಕ್ ಡಿಸ್ಕೌಂಟ್ ನೀಡುತ್ತಿದೆ. ಪ್ರಿ-ಬುಕಿಂಗ್ ಮಾಡಿದರೆ, 2 ವರ್ಷಗಳ ವಾರಂಟಿ ಮತ್ತು 1 ವರ್ಷ ಉಚಿತ ಸ್ಕ್ರೀನ್ ರಿಪ್ಲೇಸ್ಮೆಂಟ್ ಆಫರ್ ಪಡೆಯಬಹುದು. ನೀವು, ಇಂದು (ನ.29) ಮಧ್ಯಾಹ್ನ 12 ಗಂಟೆಗೆ ರಿಯಲ್‌ಮಿ ವೆಬ್‌ಸೈಟ್ ಮತ್ತು ಅಮೆಜಾನ್‌ನಲ್ಲಿ ಖರೀದಿಗೆ ಲಭ್ಯವಿರುತ್ತದೆ.
ರಿಯಲ್‌ಮಿ GT7 ಪ್ರೊ: ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ GT7 ಪ್ರೊ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.78 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು 1.5K ಓಎಲ್‌ಇಡಿ ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2780 x 1264 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 6500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನವನ್ನು ಸಹ ಹೊಂದಿದೆ.
ಪ್ರೊಸೆಸರ್ ಮತ್ತು ಸ್ಟೋರೇಜ್
ರಿಯಲ್‌ಮಿ GT7 ಪ್ರೊ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಅನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಒರಿಜಿನ್ ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಮತ್ತು 16GB RAM + 512GB ಸ್ಟೋರೇಜ್ ಹೊಂದಿದೆ. ಇದು ಡೈನಾಮಿಕ್ RAM ತಂತ್ರಜ್ಞಾನವನ್ನು ಹೊಂದಿದೆ. ನೀವು ಭೌತಿಕ RAM ಜೊತೆಗೆ 28GB RAM ಬಳಸಬಹುದು.

ಕ್ಯಾಮೆರಾ ಸೆಟಪ್
ರಿಯಲ್‌ಮಿ GT7 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ GT7 ಪ್ರೊ ಮೊಬೈಲ್ 5800mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ GT7 ಪ್ರೊ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ವೈ-ಫೈ, ಬ್ಲೂಟೂತ್ 5.4 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.


Click it and Unblock the Notifications








