Home
ಸುದ್ದಿಜಾಲ

ಇಂದು Realme GT 7 Pro ಲಾಂಚ್; ಡಿಸೈನ್‌, ಫೀಚರ್ಸ್‌ ಎಲ್ಲವೂ ಸೂಪರ್.. ಬೆಲೆ ನೋಡಿ

ಇದು ಸ್ಮಾರ್ಟ್ ಯುಗ. ಜನರು ಸ್ಮಾರ್ಟ್ ಆಗಿ ಯೋಚಿಸುತ್ತಿರುವ ಪ್ರಸ್ತುತ ದಿನದಲ್ಲಿ ದಿನಕ್ಕೊಂದು ಹೊಸ ಮೊಬೈಲ್ ಬಿಡುಗಡೆಯಾಗುತ್ತಿದೆ. ಅನೇಕ ಕಂಪನಿಗಳು ಕಾಲಕಾಲಕ್ಕೆ ಹೊಸ ಫೋನ್‌ಗಳನ್ನು ಲಾಂಚ್‌ ಮಾಡುತ್ತಿವೆ. ಅದರಂತೆ, ರಿಯಲ್‌ಮಿ (Realme) ಇಂದು (ನ.26) ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಜ್ಜಾಗಿದೆ. ಅದುವೇ ರಿಯಲ್‌ಮಿ GT7 ಪ್ರೊ (Realme GT7 Pro) ಫೋನ್. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿದೆ. ಬನ್ನಿ, ಈ ಫೋನಿನ ನಿರೀಕ್ಷಿತ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.

ದಿನದಿಂದ ದಿನಕ್ಕೆ ಸ್ಮಾರ್ಟ್​​ಫೋನ್​ ಬಳಕೆ ಹೆಚ್ಚಾಗುತ್ತಲೇ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ರಿಯಲ್‌ಮಿ ಮಾರುಕಟ್ಟೆಗೆ ಹೊಸ ​​ಫೋನ್​ಗಳನ್ನು ಪರಿಚಯಿಸುತ್ತಲೇ ಇದೆ. ಈಗಾಗಲೇ, ರಿಯಲ್‌ಮಿ GT7 ಪ್ರೊ ಮೊಬೈಲ್ ಚೀನಾದಲ್ಲಿ ಬಿಡುಗಡೆಯಾಗಿದೆ. ಇದೀಗ, ಭಾರತಕ್ಕೆ ಅಧಿಕೃತವಾಗಿ ಎಂಟ್ರಿ ಕೊಡುತ್ತಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಹೊಂದಿದೆ. ಇರದಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ, 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 6500mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇಂದು Realme GT 7 Pro ಲಾಂಚ್; ಇಲ್ಲಿವೆ ಟಾಪ್ 5G ಫೀಚರ್ಸ್‌.. ಬೆಲೆ ಎಷ್ಟು?

ರಿಯಲ್‌ಮಿ GT7 ಪ್ರೊ ನಿರೀಕ್ಷಿತ ಬೆಲೆ

12GB RAM + 256GB ಸ್ಟೋರೇಜ್ ಬೆಲೆ = 39,999 ರೂ.
16GB RAM + 256GB ಸ್ಟೋರೇಜ್ ಬೆಲೆ = 55,000 ರೂ.

ಅಮೆಜಾನ್‌ನಲ್ಲಿ ರಿಯಲ್‌ಮಿ GT7 ಪ್ರೊ ಫೋನಿನ ಮೈಕ್ರೋಸೈಟ್ ಲೈವ್ ಆಗಿದೆ. ಇದು ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಆಗಿದೆ. ಇದನ್ನು 40 ಸಾವಿರ ರೂ.ಗಳ ಬಜೆಟ್‌ನಲ್ಲಿ ಪರಿಚಯಿಸಲಾಗುತ್ತದೆ. ಭಾರತದಲ್ಲಿ ಫೋನಿನ 12GB RAM + 256GB ಸ್ಟೋರೇಜ್ ಬೆಲೆ 39,999 ರೂ. ಇರಲಿದೆ. 16GB RAM ರೂಪಾಂತರವು 55,000 ರೂ.ಗೆ ಬಿಡುಗಡೆಯಾಗಲಿದೆ.

ರಿಯಲ್‌ಮಿ GT7 ಪ್ರೊ: ಟಾಪ್ 5 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರಿಯಲ್‌ಮಿ GT7 ಪ್ರೊ ಫೋನ್ 120Hz ರಿಫ್ರೆಶ್ ದರದೊಂದಿಗೆ 6.78 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು 1.5K ಓಎಲ್‌ಇಡಿ ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 6000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನವನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಮುಂಬರುವ ರಿಯಲ್‌ಮಿ GT7 ಪ್ರೊ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾ ಕೋರ್‌ ಪ್ರೊಸೆಸರ್‌ ಹೊಂದಿದೆ. ಇದನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್‌ 15 ಆಧಾರಿತ OriginOS ನೊಂದಿಗೆ ಕೆಲಸ ಮಾಡುತ್ತದೆ. ಇದು 12GB RAM + 256GB ಮತ್ತು 16GB RAM + 512GB ಸ್ಟೋರೇಜ್ ಆಯ್ಕೆ ಹೊಂದಿದೆ.

ಇಂದು Realme GT 7 Pro ಲಾಂಚ್; ಇಲ್ಲಿವೆ ಟಾಪ್ 5G ಫೀಚರ್ಸ್‌.. ಬೆಲೆ ಎಷ್ಟು?

ಕ್ಯಾಮೆರಾ ಸೆಟಪ್

ರಿಯಲ್‌ಮಿ GT7 ಪ್ರೊ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇದೆ. 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿರುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಕಂಪನಿಯು ರಿಯಲ್‌ಮಿ GT7 ಪ್ರೊ ಫೋನಿನಲ್ಲಿ 6500mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ GT7 ಪ್ರೊ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ಮತ್ತು IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ವೈ-ಫೈ, ಬ್ಲೂಟೂತ್ 5.4 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

Best Mobiles in India

English summary
Realme GT 7 Pro Launching in India Today: Expected Price, Specs and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+