12GB RAM ಇರುವ ಈ ದೈತ್ಯ ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ; ಬೆಸ್ಟ್ ಆಫರ್!
ದೈತ್ಯ ಇ ಕಾಮರ್ಸ್ ಅಮೆಜಾನ್ ಪ್ಲಾಟ್‌ಫಾರ್ಮ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಆಫರ್ ಲಭ್ಯ ಮಾಡಿ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ ಅಮೆಜಾನ್ ತಾಣದಲ್ಲಿ ಇತ್ತೀಚಿಗೆ ಬಿಡುಗಡೆ ಆಗಿರುವ ರಿಯಲ್‌ಮಿ GT 7 ಪ್ರೊ (realme GT 7 Pro) ಮೊಬೈಲ್ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಮೊಬೈಲ್ ಸ್ನ್ಯಾಪ್‌ಡ್ರಾಗನ್ 8 ಎಲೈಟ್ ಚಿಪ್‌ಸೆಟ್ ಪ್ರೊಸೆಸರ್
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ರಿಯಲ್‌ಮಿ GT 7 ಪ್ರೊ (realme GT 7 Pro) ಸ್ಮಾರ್ಟ್‌ಫೋನ್ ಶೇ. 14% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 12 GB RAM + 256 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 59,998ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

ಅಂದಹಾಗೆ ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದ್ದು, ಇದು 1.5K OLED ಡಿಸ್‌ಪ್ಲೇ ಪಡೆದುಕೊಂಡಿದೆ. ಅಲ್ಲದೇ 12GB + 256GB ಹಾಗೂ 16GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ GT 7 ಪ್ರೊ (Realme GT 7 Pro) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ
ರಿಯಲ್‌ಮಿ GT 7 ಪ್ರೊ ಮೊಬೈಲ್ 6.78 ಇಂಚಿನ 8T LTPO ಸ್ಯಾಮ್‌ಸಂಗ್ Eco2 1.5K OLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದರೊಂದಿಗೆ ಡಾಲ್ಬಿ ವಿಷನ್, HDR10+ ಸಪೋರ್ಟ್ ಸಹ ಪಡೆದಿದೆ. ಇದು 6000nits HDR ಬ್ರೈಟ್‌ನೆಸ್, 120 ಪ್ರತಿಶತ DCI-P2 ಬಣ್ಣದ ಹರವು, 450 PPI ಸೌಲಭ್ಯ, 2000nits ಬ್ರೈಟ್‌ನೆಸ್ ಹಾಗೂ ಪಂಚ್-ಹೋಲ್ ಕಟೌಟ್ ಆಯ್ಕೆಗಳನ್ನು ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ GT 7 ಪ್ರೊ ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಎಲೈಟ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಪಡೆದಿದೆ. ಹಾಗೆಯೇ 12GB + 256 GB, 16GB + 256 GB, 12GB + 512 GB, 16GB + 512 GB ಹಾಗೂ 16GB + 1TB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಕ್ಯಾಮೆರಾ ಸೆನ್ಸಾರ್ ಎಷ್ಟು
ರಿಯಲ್‌ಮಿ GT 7 ಪ್ರೊ ಮೊಬೈಲ್ ಮೂರು ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಹಾಗೆಯೇ ದ್ವಿತೀಯ ಹಾಗೂ ಮೂರನೇಯ ಕ್ಯಾಮೆರಾಗಳು ಕ್ರಮವಾಗಿ 50 ಮೆಗಾ ಪಿಕ್ಸಲ್ ಹಾಗೂ 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಕಾಣಿಸಿಕೊಂಡಿವೆ. ಇದಲ್ಲದೇ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ಇದೆ.
ಬ್ಯಾಟರಿ ಬ್ಯಾಕ್‌ಅಪ್ ಎಷ್ಟು
ರಿಯಲ್‌ಮಿ GT 7 ಪ್ರೊ ಮೊಬೈಲ್ 6500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬೆಂಬಲವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಅಲ್ಲದೇ ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, IP69+IP68 ರೇಟಿಂಗ್, ಹೈ-ರೆಸ್ ಆಡಿಯೋ ಸೌಲಭ್ಯಗಳನ್ನು ಪಡೆದುಕೊಂಡಿದೆ.


Click it and Unblock the Notifications








