ಇಂದು ರಿಯಲ್‌ಮಿ GT ಮಾಸ್ಟರ್ ಎಡಿಷನ್ ಫೋನಿನ ಸೇಲ್!..ಆಫರ್ ಏನು?
ರಿಯಲ್ ಮಿ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ಮಿ GT ಮಾಸ್ಟರ್ ಎಡಿಷನ್ ಸ್ಮಾರ್ಟ್‌ಫೋನ್ ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 26) ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 778G 5G ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.

ಹೌದು, ರಿಯಲ್ ಮಿ ಕಂಪನಿಯ ರಿಯಲ್‌ಮಿ GT ಮಾಸ್ಟರ್ ಎಡಿಷನ್ ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಹಾಗೆಯೇ 120Hz ರೀಫ್ರೇಶ್ ರೇಟ್ ಜೊತೆಗೆ AMOLED ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ GT ಮಾಸ್ಟರ್ ಎಡಿಷನ್ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಹೌದು, ರಿಯಲ್ ಮಿ ಕಂಪನಿಯ ರಿಯಲ್‌ಮಿ GT ಮಾಸ್ಟರ್ ಎಡಿಷನ್ ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಹಾಗೆಯೇ 120Hz ರೀಫ್ರೇಶ್ ರೇಟ್ ಜೊತೆಗೆ AMOLED ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ GT ಮಾಸ್ಟರ್ ಎಡಿಷನ್ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ GT ಮಾಸ್ಟರ್ ಎಡಿಶನ್ ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಬೆಂಬಲದೊಂದಿಗೆ 6.43-ಇಂಚಿನ ಫುಲ್ ಹೆಚ್‌ಡಿ+ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು
ರಿಯಲ್‌ಮಿ GT ಮಾಸ್ಟರ್ ಎಡಿಷನ್ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 SoC ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಹಾಗೆಯೇ 6GB + 128GB, 8GB ವರೆಗೆ RAM ಮತ್ತು 256GB ವರೆಗೆ ಸಂಗ್ರಹವನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್
ರಿಯಲ್‌ಮಿ GT ಮಾಸ್ಟರ್ ಎಡಿಷನ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಪ್ರಾಥಮಿಕ ಸಂವೇದಕ, ಸೆಕೆಂಡರಿ ಕ್ಯಾಮೆರಾವು ಎಫ್ / 2.2 ಲೆನ್ಸ್ ಹೊಂದಿರುವ 8 ಮೆಗಾ ಪಿಕ್ಸೆಲ್ ಸಂವೇದಕ ಮತ್ತು ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸಂವೇದಕ ಪಡೆದಿದೆ. ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ಎಫ್ / 2.5 ಅಪರ್ಚರ್ ಹೊಂದಿದೆ.

ಬ್ಯಾಟರಿ ಪವರ್
ರಿಯಲ್‌ಮಿ GT ಮಾಸ್ಟರ್ ಎಡಿಷನ್ ಫೋನ್ 4,300mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಹಾಗೆಯೇ ಇದರೊಂದಿಗೆ 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS, NFC, ಮತ್ತು USB Type-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ GT ಮಾಸ್ಟರ್ ಎಡಿಶನ್ ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ರೂಪಾಂತರಕ್ಕೆ 25,999.ರೂ ಹಾಗೂ 8GB + 128GB ಆಯ್ಕೆಗೆ 27,999 ರೂ, ಮತ್ತು 8GB + 256GB ಸ್ಟೋರೇಜ್ ಆಯ್ಕೆಗೆ 29,999ರೂ, ಬೆಲೆಯನ್ನು ಹೊಂದಿದೆ. ಈ ಫೋನ್ ಕಾಸ್ಮೋಸ್ ಬ್ಲೂ ಮತ್ತು ಲೂನಾ ವೈಟ್ ಬಣ್ಣಗಳನ್ನು ಹೊಂದಿದೆ. ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಲಭ್ಯ ಇದೆ.


Click it and Unblock the Notifications








