ಭಾರತದಲ್ಲಿ ರಿಯಲ್‌ಮಿ GT ನಿಯೋ 2 ಫೋನ್‌ ಬಿಡುಗಡೆ! ಲಾಂಚ್‌ ಆಫರ್ ಏನು?

|

ಜನಪ್ರಿಯ ರಿಯಲ್‌ಮಿ ಸಂಸ್ಥೆ ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿದೆ. ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ಸೌಂಡ್‌ ಮಾಡಿದೆ. ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೂ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ರಿಯಲ್‌ಮಿ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಹೊಸ ರಿಯಲ್‌ಮಿ GT ನಿಯೋ 2 ಫೋನ್‌ ಲಾಂಚ್‌ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದು ಡಾಲ್ಬಿ ಅಟ್ಮೋಸ್ ಬೆಂಬಲಿಸುವ ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದೆ. ಜೊತೆಗೆ 65W ಫಾಸ್ಟ್ ಚಾರ್ಜಿಂಗ್ ಬೆಂಬಲದ 5,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ರಿಯಲ್‌ಮಿ ಜಿಟಿ ನಿಯೋ 2 ಸ್ಮಾರ್ಟ್‌ಫೋನ್‌ 1080 × 2400 ಪಿಕ್ಸೆಲ್‌ ರೆಸಲ್ಯೂಶನ್‌ ಪಡೆದಿರುವ 6.62-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು ಡಿಸಿ ಡಿಮ್ಮಿಂಗ್‌ನೊಂದಿಗೆ ಬರುತ್ತದೆ. ಈ ಡಿಸ್‌ಪ್ಲೇ 600Hz ಟಚ್‌ ಸ್ಯಾಂಪಲ್‌ ರೇಟ್‌ ಮತ್ತು HDR10+ ಬೆಂಬಲವನ್ನು ಹೊಂದಿದೆ. ಜೊತೆಗೆ ಸ್ಕ್ರೀನ್‌ ಟು ಬಾಡಿ 92.60% ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ 7GB ವರ್ಚುವಲ್ ಮೆಮೊರಿಯನ್ನು ಕೂಡ ಬೆಂಬಲಿಸಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಬೊಕೆ, ಎಚ್‌ಡಿಆರ್, ಫೇಸ್‌ ಡಿಟೆಕ್ಷನ್‌, ಫಿಲ್ಟರ್, ಸೂಪರ್ ನೈಟ್ ಸ್ಕೇಪ್ ನಂತಹ ಫೀಚರ್ಸ್‌ಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 65W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 36 ನಿಮಿಷಗಳಲ್ಲಿ ಫೋನ್ ಅನ್ನು 0 ದಿಂದ 100% ಫುಲ್‌ ಚಾರ್ಜ್ ಮಾಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ, ಬ್ಲೂಟೂತ್‌, GPS/ A-GPS, NFC ಮತ್ತು USB ಟೈಪ್‌-ಸಿ ಪೋರ್ಟ್ ಬೆಂಬಲಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB + 128GB ಶೇಖರಣಾ ರೂಪಾಂತರಕ್ಕೆ 31,999.ರೂ ಬೆಲೆ ಹೊಂದಿದೆ. ಜೊತೆಗೆ 12GB + 256GB ಸ್ಟೋರೇಜ್ ಆಯ್ಕೆಯ ಬೆಲೆ 35,999.ರೂ.ಬೆಲೆ ಹೊಂದಿದೆ. ಇನ್ನು ಈ ಫೋನ್‌ ನಿಯೋ ಬ್ಲಾಕ್, ನಿಯೋ ಬ್ಲೂ ಮತ್ತು ನಿಯೋ ಗ್ರೀನ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಅಕ್ಟೋಬರ್ 17 ರಂದು ಫ್ಲಿಪ್‌ಕಾರ್ಟ್, ರಿಯಲ್‌ಮಿ.ಕಾಮ್ ಮತ್ತು ದೇಶದ ಮೇನ್‌ ರಿಟೇಲ್‌ ಸ್ಟೋರ್‌ ಮೂಲಕ 12 ರಿಂದ (ಮಧ್ಯರಾತ್ರಿ) ಮಾರಾಟವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್‌ ಹಬ್ಬದ ಸೀಸನ್ ಸೇಲ್‌ನಲ್ಲಿ 7,000ರೂ.ಗಳ ವರೆಗೆ ರಿಯಾಯಿತಿ ಸಿಗಲಿದೆ.

Best Mobiles in India

English summary
Realme GT Neo 2 has the Qualcomm Snapdragon 870 SoC, along with up to 12GB of RAM.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X