Home
ಸುದ್ದಿಜಾಲ

ರಿಯಲ್‌ಮಿ GT ನಿಯೋ 3 ಬಿಡುಗಡೆ! 150W ವೇಗದ ಚಾರ್ಜಿಂಗ್‌ ವಿಶೇಷ!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ಏರುಗತಿಯ ಜನಪ್ರಿಯತೆ ಹೊಂದಿದೆ. ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ಫೀಚರ್ಸ್‌ ಸ್ಮಾರ್ಟ್‌ಫೋನ್‌ಗಳಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.7-ಇಂಚಿನ 2K ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಫೋನ್‌ 4,500mAh ಬ್ಯಾಟರಿ ಮತ್ತು 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಮತ್ತು ರಚನೆ

ಡಿಸ್‌ಪ್ಲೇ ಮತ್ತು ರಚನೆ

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 1,000Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಮತ್ತು DC ಡಿಮ್ಮಿಂಗ್‌ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ರಿಯಲ್‌ಮಿ UI 3.0 ಜೊತೆಗೆ ರನ್ ಆಗುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಸ್ಟೇನ್‌ಲೆಸ್ ಸ್ಟೀಲ್ ಆವಿ ಕೂಲಿಂಗ್ ತಂತ್ರಜ್ಞಾನವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಸನ್ಸಾರ್‌ ಬೆಂಬಲಿಸಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಜೊತೆಗೆ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ S5K3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಎರಡು ಬ್ಯಾಟರಿ ಮತ್ತು ಚಾರ್ಜಿಂಗ್ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ 4,500mAh ಸಾಮರ್ಥ್ಯದ ಬ್ಯಾಟರಿ 150W ಅಲ್ಟ್ರಾಡಾರ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯ 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS, NFC ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ಮಾದರಿಗೆ 36,999ರೂ.ಬೆಲೆ ಹೊಂದಿದೆ. ಆದರೆ 8GB + 256GB ರೂಪಾಂತರದ ಬೆಲೆ 38,999ರೂ.ಆಗಿದೆ. ಹಾಗೆಯೇ ರಿಯಲ್‌ಮಿ GT ನಿಯೋ 3 ಫೋನ್‌ 150W ರೂಪಾಂತರದ 12GB + 256GB ಮಾದರಿಗೆ 42,999ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಸ್ಫಾಲ್ಟ್ ಬ್ಲ್ಯಾಕ್, ನೈಟ್ರೋ ಬ್ಲೂ ಮತ್ತು ಸ್ಪ್ರಿಂಟ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Realme GT Neo 3 With 150W UltraDart Fast Charging Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+