ಫ್ಲಿಪ್‌ಕಾರ್ಟ್‌ನಲ್ಲಿ ಇಂದು ರಿಯಲ್‌ಮಿ GT ನಿಯೋ 3T ಫಸ್ಟ್‌ ಸೇಲ್‌! ಆಫರ್‌ ಏನು?

|

ಭಾರತದಲ್ಲಿ ಕಳೆದ ವಾರ ಬಿಡುಗಡೆಯಾಗಿದ್ದ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇಂದು(ಸೆ.23) ಫ್ಲಿಪ್‌ಕಾರ್ಟ್‌ ಮೂಲಕ ತನ್ನ ಫಸ್ಟ್‌ ಸೇಲ್‌ ಆರಂಭಿಸಲಿದೆ. ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ಮೂರು ಬಣ್ಣಗಳ ಆಯ್ಕೆಯಲ್ಲಿ ಮತ್ತು ಮೂರು ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಇಂದು ತನ್ನ ಫಸ್ಟ್‌ ಸೇಲ್‌ ನಡೆಸಲಿದೆ. ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಪ್ರಯುಕ್ತ 10% ಡಿಸ್ಕೌಂಟ್‌ ಅನ್ನು ಕೂಡ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಹಾಗಾದ್ರೆ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಫಸ್ಟ್‌ ಸೇಲ್‌ ಪ್ರಯುಕ್ತ ಏನೆಲ್ಲಾ ಆಫರ್‌ ಲಭ್ಯವಾಗಲಿದೆ. ಈ ಫೋನಿನ ಫೀಚರ್ಸ್‌ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಫಸ್ಟ್‌ ಸೇಲ್‌ ಆಫರ್‌ ಏನಿದೆ?

ಫಸ್ಟ್‌ ಸೇಲ್‌ ಆಫರ್‌ ಏನಿದೆ?

ಭಾರತದಲ್ಲಿ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 25,999ರೂ. ಬೆಲೆಯನ್ನು ಹೊಂದಿದೆ. ಇದರ 8GB RAM ಮತ್ತು 128GB ಇಮಟರ್‌ ಸ್ಟೋರೇಜ್‌ ಆಯ್ಕೆಯ ಬೆಲೆ 27,999ರೂ. ಹೊಂದಿದೆ. ಜೊತೆಗೆ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆಯು 29,999ರೂ.ಬೆಲೆಯನ್ನು ಹೊಂದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಮೇಲೆ 10% ಡಿಸ್ಕೌಂಟ್‌ ನೀಡುತ್ತಿದೆ.

ಫ್ಲಿಪ್‌ಕಾರ್ಟ್‌ನಲ್ಲಿ

ಇನ್ನು ಫ್ಲಿಪ್‌ಕಾರ್ಟ್‌ನಲ್ಲಿ ಆಕ್ಸಿಸ್‌ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ EMI ಮೂಲಕ ಈ ಫೋನ್‌ ಖರೀದಿಸಿದರೆ 1,500ರೂ ರಿಯಾಯಿತಿ ದೊರೆಯಲಿದೆ. ಇದಲ್ಲದೆ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ EMI ವಹಿವಾಟುಗಳ ಮೇಲೆ ಕೂಡ 1,500ರೂ.ಡಿಸ್ಕೌಂಟ್‌ ಸಿಗಲಿದೆ. ಜೊತೆಗೆ ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ 1,500 ರೂ. ವರೆಗಿನ ಎಕ್ಸ್‌ಚೇಂಜ್‌ ಆಫರ್‌ ಅನ್ನು ಸಹ ಪಡೆದುಕೊಳ್ಳಬಹುದಾಗಿದೆ. ಈ ಫೋನ್‌ ಡ್ಯಾಶ್ ಯೆಲ್ಲೋ, ಡ್ರಿಫ್ಟಿಂಗ್ ವೈಟ್ ಮತ್ತು ಶೇಡ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 6.62-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡುತ್ತದೆ. ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಅನ್ನು ರಿಯಲ್‌ಮಿ UI 3.0 ಜೊತೆಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಫೋನ್‌ ಡೈನಾಮಿಕ್ RAM ವಿಸ್ತರಣೆ ತಂತ್ರಜ್ಞಾನವನ್ನು ಹೊಂದಿದ್ದು, ಹೆಚ್ಚುವರಿ 5GB RAM ಅನ್ನು ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಎಂಟು ಕೂಲಿಂಗ್ ಲೇಯರ್‌ಗಳನ್ನು ಒಳಗೊಂಡಿರುವ ಸ್ಟೇನ್‌ಲೆಸ್ ಸ್ಟೀಲ್ ಆವಿ ಕೂಲಿಂಗ್ ಸಿಸ್ಟಮ್ ಪ್ಲಸ್ ಅನ್ನು ಹೊಂದಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ

ಟ್ರಿಪಲ್‌ ರಿಯರ್‌ ಕ್ಯಾಮೆರಾ

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ 119 ಡಿಗ್ರಿ ಫೀಲ್ಡ್-ಆಫ್-ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್‌ಡಾರ್ಟ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, 5G, 4G LTE, ಬ್ಲೂಟೂತ್ v5.2, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಆನ್‌ಬೋರ್ಡ್‌ನಲ್ಲಿ ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸರ್, ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೊ ಸೆನ್ಸಾರ್‌ ಮತ್ತು ಅಂಡರ್-ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ.

Best Mobiles in India

English summary
Realme GT Neo 3T goes on first sale today in India via Flipkart

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X