ಸಖತ್ ಬೆಲೆ ಇಳಿಕೆ ಕಂಡ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್!
ಕಳೆದ ವರ್ಷ ಬಿಡುಗಡೆಯಾದ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಗ್ರಾಹಕರನ್ನು ಆಕರ್ಷಿಸಿದೆ.
ಹೌದು, ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ 8GB + 128GB ಮತ್ತು 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಎರಡು ವೇರಿಯಂಟ್‌ನಲ್ಲಿಯೂ ಡಿಸ್ಕೌಂಟ್ ಲಭ್ಯ ಇದೆ. ಅಂದಹಾಗೆ ಈ ಫೋನ್ ಡ್ಯಾಶ್ ಯೆಲ್ಲೋ ಹಾಗೂ ಡ್ರಾಫ್ಟಿಂಗ್ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಡಿಸ್ಕೌಂಟ್ ಬಳಿಕ ಈ ಫೋನ್ 8GB + 128GB ವೇರಿಯಂಟ್ 19,999ರೂ. ಗಳಿಗೆ ಲಭ್ಯ. ಅದೇ ರೀತಿ 8GB + 256GB ಸ್ಟೋರೇಜ್ ವೇರಿಯಂಟ್ 20,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ : ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ 6.62-ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡುತ್ತದೆ. ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯವೈಖರಿ : ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಅನ್ನು ರಿಯಲ್‌ಮಿ UI 3.0 ಜೊತೆಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಫೋನ್ ಡೈನಾಮಿಕ್ RAM ವಿಸ್ತರಣೆ ತಂತ್ರಜ್ಞಾನವನ್ನು ಹೊಂದಿದ್ದು, ಹೆಚ್ಚುವರಿ 5GB RAM ಅನ್ನು ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಎಂಟು ಕೂಲಿಂಗ್ ಲೇಯರ್‌ಗಳನ್ನು ಒಳಗೊಂಡಿರುವ ಸ್ಟೇನ್‌ಲೆಸ್ ಸ್ಟೀಲ್ ಆವಿ ಕೂಲಿಂಗ್ ಸಿಸ್ಟಮ್ ಪ್ಲಸ್ ಅನ್ನು ಹೊಂದಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ : ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ 119 ಡಿಗ್ರಿ ಫೀಲ್ಡ್-ಆಫ್-ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ : ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್‌ಡಾರ್ಟ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, 5G, 4G LTE, ಬ್ಲೂಟೂತ್ v5.2, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದಲ್ಲದೆ ಆನ್‌ಬೋರ್ಡ್‌ನಲ್ಲಿ ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸರ್, ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್, ಗೈರೊ ಸೆನ್ಸಾರ್ ಮತ್ತು ಅಂಡರ್-ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ.
ಮೆಮೊರಿ ಮತ್ತು ಕಲರ್ ಆಯ್ಕೆ : ಭಾರತದಲ್ಲಿ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಮತ್ತು 8GB RAM + 128GB ಸ್ಟೋರೇಜ್ ಆವೃತ್ತಿಯ ಆಯ್ಕೆ ಪಡೆದಿದೆ. ಇದರೊಂದಿಗೆ ಈ ಫೋನ್ ಡ್ಯಾಶ್ ಹಳದಿ, ಡ್ರಿಫ್ಟಿಂಗ್ ವೈಟ್ ಮತ್ತು ಶೇಡ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








