ರಿಯಲ್‌ಮಿಯ ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಬಿಗ್‌ ಡಿಸ್ಕೌಂಟ್‌ ಪಡೆದಿದೆ!

|

ರಿಯಲ್‌ಮಿ ಕಂಪೆನಿ ತನ್ನ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಬಿಗ್‌ ಆಫರ್‌ ನೀಡಿದೆ. ಭಾರತದಲ್ಲಿ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಬಿಗ್‌ ಡಿಸ್ಕೌಂಟ್‌ ಅನ್ನು ಘೋಷಿಸಿದೆ. ಸೆಪ್ಟೆಂಬರ್‌ 16 ರಂದು ಭಾರತದಲ್ಲಿ ಲಾಂಚ್‌ ಆಗಲಿರುವ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಭಾರಿ ರಿಯಾಯಿತಿಯನ್ನು ಪಡೆದುಕೊಂಡಿದೆ. ಅದರಲ್ಲೂ ಈ ಸ್ಮಾರ್ಟ್‌ಫೋನಿನ ಮೇಲೆ 7,000ರೂ. ಗಳವರೆಗೆ ರಿಯಾಯಿತಿ ದೊರೆಯಲಿದೆ ಎನ್ನಲಾಗಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿಯ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸಾಕಷ್ಟು ಗಮನ ಸೆಳೆದಿರುವ ಈ ಸ್ಮಾರ್ಟ್‌ಫೋನ್‌ ಇದೀಗ ಭಾರತದಲ್ಲಿ ವಿಶೇಷ ರಿಯಾಯಿತಿ ಕಾರಣದಿಂದ ಸಂಚಲನ ಸೃಷ್ಟಿಸಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಮೂಲ ಬೆಲೆ ಇನ್ನು ಬಹಿರಂಗವಾಗಿಲ್ಲ. ಆದರೆ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 7,000ರೂ. ರಿಯಾಯಿತಿ ಪಡೆದುಕೊಳ್ಳುವುದು ಪಕ್ಕಾ ಆಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 6.62 ಇಂಚಿನ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿರಲಿದೆ. ಇದು 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡುತ್ತದೆ ಎಂದು ರಿಯಲ್‌ಮಿ ಕಂಪನಿ ಹೇಳಿಕೊಂಡಿದೆ. ಇದರೊಂದಿಗೆ ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಸಹ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ರನ್‌ ಆಗಲಿದೆ. ಜೊತೆಗೆ Adreno 650 GPU ಮತ್ತು 8GB RAM ಅನ್ನು ಹೊಂದಿದೆ. ಈ ಫೋನ್‌ 5GB ವರೆಗಿನ ವರ್ಚುವಲ್ RAM ಅನ್ನು ಸಹ ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 80W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ಆವೃತ್ತಿ 5.2, ಡ್ಯುಯಲ್-ಬ್ಯಾಂಡ್ Wi-Fi, VC ಕೂಲಿಂಗ್ ಅನ್ನು ಬೆಂಬಲಿಸಲಿದೆ. ಫೋನ್ 5G ಸಂಪರ್ಕವನ್ನು ಸಹ ಹೊಂದಿದೆ. ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆಯನ್ನು ಈ ಫೋನ್‌ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಬೆಲೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ $469.99 (ಸುಮಾರು 37,500ರೂ) ಆರಂಭಿಕ ಬೆಲೆಗೆ ಬಿಡುಗಡೆ ಮಾಡಿದೆ. ಇನ್ನು ಭಾರತದಲ್ಲಿ ಈ ಫೋನ್‌ ಇದೇ ಸೆಪ್ಟೆಂಬರ್ 16 ರಂದು ಮಧ್ಯಾಹ್ನ 12.30 ಕ್ಕೆ ಬಿಡುಗಡೆಯಾಗಲಿದೆ. ಈಗಾಗಲೇ ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನಿನ ಲ್ಯಾಂಡಿಂಗ್‌ ಪೇಜ್‌ ಲೈವ್‌ ಆಗಿದೆ.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 8GB ಮೆಮೊರಿ ಮತ್ತು 256GB ಆಂತರೀಕ ಸಂಗ್ರಹ ಸಾಮರ್ಥ್ಯದ ಆಯ್ಕೆ ಹೊಂದಿರಲಿದೆ. ಹೆಚ್ಚುವರಿಯಾಗಿ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಸ್ಲಾಟ್ ಆಯ್ಕೆ ಇರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈ ಫೋನ್‌ ಡ್ಯಾಶ್ ಹಳದಿ ಮತ್ತು ಡ್ರಿಫ್ಟಿಂಗ್ ವೈಟ್ ಬಣ್ಣದ ರೂಪಾಂತರಗಳಲ್ಲಿ ಹಿಂಭಾಗದಲ್ಲಿ ಚೆಕರ್ಡ್ ಫ್ಲ್ಯಾಗ್/ರೇಸಿಂಗ್ ವಿನ್ಯಾಸವನ್ನು ಫೋನ್ ಒಳಗೊಂಡಿದೆ ಎನ್ನಲಾಗಿದೆ.

Best Mobiles in India

English summary
Realme GT Neo 3T Will Be Available With Rs. 7,000 Discount On Flipkart

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X