Home
ಸುದ್ದಿಜಾಲ

ಸದ್ಯದಲ್ಲೇ ರಿಯಲ್‌ಮಿ GT ನಿಯೋ 4 ಫೋನ್‌ ಬಿಡುಗಡೆಗೆ ತಯಾರಿ! ಏನೆಲ್ಲಾ ನಿರೀಕ್ಷೆ?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳಲ್ಲಿ ರಿಯಲ್‌ಮಿ ಕೂಡ ಒಂದಾಗಿದೆ. ರಿಯಲ್‌ಮಿ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಆಯ್ಕೆಯಾಗಿ ಗುರುತಿಸಿಕೊಂಡಿದೆ. ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ರಿಯಲ್‌ಮಿ GT ನಿಯೋ 4 ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಸಾದ್ಯತೆಯಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ GT ನಿಯೋ 4 ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಇನ್ನು ಅಂತಿಮವಾಗಿಲ್ಲವಾದರೂ ಇದರ ಫೀಚರ್ಸ್‌ಗಳು ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಜೊತೆಗೆ 100W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿರಬಹುದು?

ಡಿಸ್‌ಪ್ಲೇ ವಿನ್ಯಾಸ ಹೇಗಿರಬಹುದು?

ರಿಯಲ್‌ಮಿ GT ನಿಯೋ 4 ಸ್ಮಾರ್ಟ್‌ಫೋನ್‌ 6.7 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 2772 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಜೊತೆಗೆ ಈ ಡಿಸ್‌ಪ್ಲೇ 2160 Hz PWM ಡಿಮ್ಮಿಂಗ್ ಅನ್ನು ಹೊಂದಿರುತ್ತದೆ. ಇದು 120 Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ ಎನ್ನಲಾಗಿದ್ದು, 94.2 % ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿರಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT ನಿಯೋ 4 ಸ್ಮಾರ್ಟ್‌ಫೋನ್‌ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್ ವೇಗವನ್ನು ಹೊಂದಿರಬಹುದು ಎಂಬ ನಿರೀಕ್ಷೆಯಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡುವ ಸಾಧ್ಯತೆಯಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ರಿಯಲ್‌ಮಿ GT ನಿಯೋ 4 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನಲ್ಲಿ ಬರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ರಿಯಲ್‌ಮಿ GT ನಿಯೋ 4 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 100W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೊಮೀಟರ್, ಕಂಪಾಸ್, ಗೈರೋಸ್ಕೋಪ್ ಸೆನ್ಸಾರ್‌ಗಳನ್ನು ಪಡೆದಿರಲಿದೆ. ಆದರೆ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಇನ್ನು ಕೂಡ ಅಂತಿಮವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಮೊದಲಿಗೆ ಚೀನಾದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಕೆಲವು ದಿನಗಳ ನಂತರ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಮಧ್ಯಮ ಶ್ರೇಣಿಯ ಬೆಲೆಯಲ್ಲಿ ಬರುವ ನಿರೀಕ್ಷೆಯನ್ನು ಇಡಲಾಗಿದೆ. ಇದರ ಕಲರ್‌ ಆಯ್ಕೆಗಳ ಬಗ್ಗೆ ಇನ್ನು ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Realme GT Neo 4 Smartphone Specifications Leaked
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+