Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಯಲ್‌ಮಿ GT ನಿಯೋ 5 SE! 100W ವೇಗದ ಚಾರ್ಜಿಂಗ್‌ ಸಾಮರ್ಥ್ಯ!

ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಅತಿ ಕಡಿಮೆ ಅವಧಿಯಲ್ಲಿಯೇ ಜನಪ್ರಿಯ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ವಿಭಿನ್ನ ಕ್ಯಾಮೆರಾ ಸೆಟ್‌ಅಪ್‌ ಹಾಗೂ ಡಿಸ್‌ಪ್ಲೇ ವಿನ್ಯಾಸದಿಂದ ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು ಗಮನಸೆಳೆದಿವೆ. ಸದ್ಯ ಇದೀಗ ಹೊಸ ರಿಯಲ್‌ಮಿ GT ನಿಯೋ 5 SE ಪರಿಚಯಿಸಿ ಸದ್ದು ಮಾಡ್ತಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ GT ನಿಯೋ 5 SE ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಯಲ್‌ಮಿ GT ನಿಯೋ 5 SE! 100W ವೇಗದ ಚಾರ್ಜಿಂಗ್‌!

ರಿಯಲ್‌ಮಿ GT ನಿಯೋ 5 SE ಫೀಚರ್ಸ್‌ ಹೇಗಿದೆ?

ರಿಯಲ್‌ಮಿ GT ನಿಯೋ 5 SE ಸ್ಮಾರ್ಟ್‌ಫೋನ್‌ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,240x2,772 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 144Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 93.69 ಬಾಡಿ-ಟು-ಸ್ಕ್ರೀನ್ ಅನುಪಾತವನ್ನು ಪಡೆದುಕೊಂಡಿದೆ.

ರಿಯಲ್‌ಮಿ GT ನಿಯೋ 5 SE ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT ನಿಯೋ 5 SE ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಯಲ್‌ಮಿ GT ನಿಯೋ 5 SE! 100W ವೇಗದ ಚಾರ್ಜಿಂಗ್‌!

ರಿಯಲ್‌ಮಿ GT ನಿಯೋ 5 SE ಕ್ಯಾಮೆರಾ ಸೆಟ್‌ಅಪ್‌ ಯಾವುದು?

ರಿಯಲ್‌ಮಿ GT ನಿಯೋ 5 SE ಸ್ಮಾರ್ಟ್‌ಫೋನ್‌ AI ಬೆಂಬಲಿತ ಮ್ಯಾಟ್ರಿಕ್ಸ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರಿಯಲ್‌ಮಿ GT ನಿಯೋ 5 SE ಬ್ಯಾಟರಿ ಬ್ಯಾಕ್‌ಅಪ್‌?

ರಿಯಲ್‌ಮಿ GT ನಿಯೋ 5 SE ಸ್ಮಾರ್ಟ್‌ಫೋನ್‌ 5,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS, Glonass, BeiDou, Galileo, QZSS, NFC, ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿವೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಯಲ್‌ಮಿ GT ನಿಯೋ 5 SE! 100W ವೇಗದ ಚಾರ್ಜಿಂಗ್‌!

ರಿಯಲ್‌ಮಿ GT ನಿಯೋ 5 SE ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ GT ನಿಯೋ 5 SE ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 1,999 (ಸುಮಾರು 24,000ರೂ)ಬೆಲೆ ಹೊಂದಿದೆ. ಇನ್ನು 12GB RAM + 2.56GB ಆಯ್ಕೆಗೆ CNY 2,199 (ಸುಮಾರು 26,200ರೂ)ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಫೋನ್ 12GB RAM + 512GB ಸ್ಟೋರೇಜ್ ಮಾದರಿಯ ಆಯ್ಕೆಗೆ CNY 2,299 (ಸುಮಾರು 27,400ರೂ) ಬೆಲೆ ಹೊಂದಿದೆ. ಇದರ ಟಾಪ್-ಆಫ್-ಲೈನ್ 16GB RAM + 1TB ಮಾಡೆಲ್ ಆಯ್ಕೆಯು CNY 2,599 (ಸುಮಾರು 31,000ರೂ)ಬೆಲೆಯನ್ನು ಪಡೆದುಕೊಂಡಿದೆ.

Best Mobiles in India

English summary
Realme GT Neo 5 SE Launched: Price and Specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+