Home
ಸುದ್ದಿಜಾಲ

ರಿಯಲ್‌ಮಿ GT ನಿಯೋ 6 ಫೋನ್‌ ಡಿಸೈನ್‌ ಬಹಿರಂಗ! ಇದರ ವಿನ್ಯಾಸವೇ ಫುಲ್‌ ಡಿಫರೆಂಟ್ !

ಟೆಕ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ಮತ್ತೊಂದು ಹೊಸ ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಇದನ್ನು ರಿಯಲ್‌ಮಿ GT ನಿಯೋ 6 ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಸಾಕಷ್ಟು ಸೌಂಡ್‌ ಮಾಡ್ತಿದೆ. ಈ ಸ್ಮಾರ್ಟ್‌ಫೋನ್‌ನ ವಿನ್ಯಾಸವೇ ಸಾಕಷ್ಟು ಚರ್ಚೆ ಆಗ್ತಿದ್ದು ಇದಕ್ಕೆ ಸಂಬಂಧಿಸಿದ ಫೀಚರ್ಸ್‌ ಬಹಿರಂಗವಾಗಿದೆ.

ಹೌದು, ರಿಯಲ್‌ಮಿ GT ನಿಯೋ 6 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಇದು ಸ್ನಾಪ್‌ಡ್ರಾಗನ್‌ 8 Gen 2SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ GT ನಿಯೋ 6 ಫೋನ್‌ ಡಿಸೈನ್‌ ಬಹಿರಂಗ! ಇದರ ವಿನ್ಯಾಸವೇ ಫುಲ್‌ ಡಿಫರೆಂಟ್

ರಿಯಲ್‌ಮಿ GT ನಿಯೋ 6 ಡಿಸ್‌ಪ್ಲೇ ರಚನೆ ನಿರೀಕ್ಷೆ?
ರಿಯಲ್‌ಮಿ GT ನಿಯೋ 6 ಸ್ಮಾರ್ಟ್‌ಫೋನ್‌ 6.74 ಇಂಚಿನ 1.5K 10-ಬಿಟ್ ಅಮೋಲೆಡ್‌ ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇ 2772 x 1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಜೊತೆಗೆ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ರಿಯಲ್‌ಮಿ GT ನಿಯೋ 6 ಪ್ರೊಸೆಸರ್‌ ಯಾವುದು?
ರಿಯಲ್‌ಮಿ GT ನಿಯೋ 6 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ನೀಡುವ ಸಾಧ್ಯತೆ ಕೂಡ ಇದೆ.

ರಿಯಲ್‌ಮಿ GT ನಿಯೋ 6 ಕ್ಯಾಮೆರಾ ಸೆಟ್‌ಅಪ್‌
ರಿಯಲ್‌ಮಿ GT ನಿಯೋ 6 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಇರಲಿದೆ ಎಂದು ಅಂದಾಜಿಸಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಇರಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಹಿಂಭಾಗದಲ್ಲಿ ಫ್ಯ್ಲಾಶ್‌ ಅನ್ನು ಕೂಡ ನೀಡಲಾಗುತ್ತದೆ ಎಂದು ವರದಿಯಾಗಿದೆ.

ರಿಯಲ್‌ಮಿ GT ನಿಯೋ 6 ಬ್ಯಾಟರಿ ಮತ್ತು ಇತರೆ ಸೌಲಭ್ಯ ನಿರೀಕ್ಷೆ
ರಿಯಲ್‌ಮಿ GT ನಿಯೋ 6 ಸ್ಮಾರ್ಟ್‌ಫೋನ್‌ ಬ್ಯಾಟರಿ ಸಾಮರ್ಥ್ಯದ ಬಗ್ಗೆ ಮಾಹಿತಿ ಇಲ್ಲ. ಆದರೆ ಈ ಫೋನ್‌ ಬ್ಯಾಟರಿ 100W SUPERVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಕೂಡ ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ರಿಯಲ್‌ಮಿ GT ನಿಯೋ 6 ಬೆಲೆ ಎಷ್ಟಿರಬಹುದು?
ರಿಯಲ್‌ಮಿ GT ನಿಯೋ 6 ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ನಿಖರ ಬೆಲೆ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಬಿಡುಗಡೆ ದಿನಾಂಕ ಹತ್ತಿರವಾದಾಗ ಇದರ ಹೆಚ್ಚಿನ ವಿವರಗಳು ಬಹಿರಂಗವಾಗಲಿದೆ ಎಂದು ಹೇಳಲಾಗಿದೆ.

Best Mobiles in India

English summary
Realme GT Neo 6 Leaked Render Reveals Snapdragon 8 Gen 2 SoC
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+