ಎಂಟ್ರಿಗೂ ಮುನ್ನವೇ ಬಹಿರಂಗವಾಯ್ತು ರಿಯಲ್‌ಮಿ GT ನಿಯೋ 6 SE ಫೀಚರ್ಸ್
ರಿಯಲ್‌ಮಿ ಕಂಪೆನಿಯ ಫೋನ್‌ಗಳಿಗೆ ಟೆಕ್ ವಲಯದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ತನ್ನ ವಿಭಿನ್ನ ವಿನ್ಯಾಸ ಹಾಗೂ ಸ್ಟೈಲಿಶ್ ಲುಕ್‌ನಿಂದಾಗಿ ರಿಯಲ್‌ಮಿ ಫೋನ್‌ಗಳು ಸದ್ದು ಮಾಡುತ್ತಿವೆ. ಇದರ ಮುಂದುವರೆದ ಭಾಗವಾಗಿ ಇದೀಗ ಹೊಸ ರಿಯಲ್‌ಮಿ GT ನಿಯೋ 6 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದಕ್ಕೆ ತಯಾರಿ ನಡೆದಿದೆ.
ಹೌದು, ರಿಯಲ್‌ಮಿ GT ನಿಯೋ 6 ಸರಣಿಯ ಸ್ಮಾರ್ಟ್‌ಫೋನ್‌ಗಳ ಬಿಡುಗಡೆಗೆ ಸಿದ್ಧತೆ ನಡೆದಿದೆ. ಈ ಸ್ಮಾರ್ಟ್‌ಫೋನ್‌ಗಳ ವಿವರಗಳು ಇದೀಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ರಿಯಲ್‌ಮಿ ನಿಯೋ 6 SE ಸ್ಮಾರ್ಟ್‌ಫೋನ್ ಸಾಕಷ್ಟು ಸದ್ದು ಮಾಡುವ ಲಕ್ಷಣ ಕಾಣಿಸಿಕೊಂಡಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ Gen 3SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ವಿಶ್ವದ ಮೊದಲ ಫೋನ್ ಅಗಿರಲಿದೆ. ಹಾಗಾದ್ರೆ ರಿಯಲ್‌ಮಿ GT ನಿಯೋ 6 ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ ಫೀಚರ್ಸ್ ವಿವರ
Realme GT Neo 6 SE ಸ್ಮಾರ್ಟ್‌ಫೋನ್ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು 1240 x 2772 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದು 451 ಪಿಪಿಐ ಪಿಕ್ಸೆಲ್ ಸಾಂದ್ರತೆಯೊಂದಿಗೆ ಬರಲಿದ್ದು, 1500Hz ವರೆಗೆ ತತ್‌ಕ್ಷಣದ ಸ್ಯಾಪ್ಲಿಂಗ್ ರೇಟ್‌ನಲ್ಲಿರಲಿದೆ. ಇದು 360 Hz ಟಚ್ ಸ್ಯಾಂಪ್ಲಿಂಗ್ ರೇಟ್‌ನೊಂದಿಗೆ ಬರಲಿದೆ. ವೀಡಿಯೊ ವಿಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಹೊಂದಿರಲಿದೆ.
ರಿಯಲ್‌ಮಿ GT ನಿಯೋ 6 SE ಪ್ರೊಸೆಸರ್ ಯಾವುದು?
ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ Gen3SoC ಪ್ರೊಸೆಸರ್‌ನಲ್ಲಿ ಬರಲಿದೆ. ಹಾಗೆಯೇ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯನ್ನು ಹೊಂದಿರುವ ನಿರೀಕ್ಷೆಯನ್ನು ಇಡಲಾಗಿದೆ.
ರಿಯಲ್‌ಮಿ GT ನಿಯೋ 6 SE ಕ್ಯಾಮೆರಾ ಸೆಟಪ್
ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಬರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ರಿಯಲ್‌ಮಿ GT ನಿಯೋ 6 SE ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ 5500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ಸೂಪರ್ ಡಾರ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು,
10W ರಿವರ್ಸ್ ಚಾರ್ಜಿಂಗ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v2.0
ಐಆರ್ ಬ್ಲಾಸ್ಟರ್, ಅನ್ನು ಹೊಂದಿರಲಿದೆ.
ರಿಯಲ್‌ಮಿ GT ನಿಯೋ 6 SE ಬೆಲೆ ನಿರೀಕ್ಷೆ ಏನಿದೆ?
ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರಲಿದೆ ಎನ್ನಲಾಗಿದೆ. ಇದರ ಸಂಪೂರ್ಣ ಬೆಲೆ ವಿವರಗಳು ಬಿಡುಗಡೆಯ ನಂತರವಷ್ಟೇ ತಿಳಿದುಬರಲಿದೆ. ಈ ಸ್ಮಾರ್ಟ್‌ಫೋನ್ ಕಲರ್ ಆಯ್ಕೆಗಳ ಬಗ್ಗೆ ಕೂಡ ಇನ್ನಷ್ಟೇ ವಿವರಗಳು ತಿಳಿದುಬರಬೇಕಿದೆ.


Click it and Unblock the Notifications








