Home
ಸುದ್ದಿಜಾಲ

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌ ಲಾಂಚ್!..64ಎಂಪಿ ಕ್ಯಾಮೆರಾ!

ರಿಯಲ್‌ ಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರಿಯಲ್‌ ಮಿ ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಪ್ರಮುಖ ಹೈಲೈಟ್‌ ಆಗಿದೆ.

ಮಾರುಕಟ್ಟೆಯಲ್ಲಿ

ಹೌದು, ರಿಯಲ್‌ ಮಿ ಕಂಪನಿಯು ಚೀನಾ ಮಾರುಕಟ್ಟೆಯಲ್ಲಿ ತನ್ನ ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. 6GB + 128GB, 8GB + 128GB ಮತ್ತು 12GB + 256GB ಇದರೊಂದಿಗೆ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಹೊಂದಿದೆ. ಡಾಲ್ಬಿ ಸೌಂಡ್‌ ಬೆಂಬಲವನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.43 ಇಂಚಿನ ಹೆಚ್‌ಡಿ + AMOLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿ ನಡುವಿನ ಅಂತರವು 91.7 ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ ಮೀಡಿಯಾ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6GB + 128GB, 8GB + 128GB ಮತ್ತು 12GB + 256GB ಆಯ್ಕೆ ಹೊಂದಿದೆ ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ ವಿಶೇಷ

ತ್ರಿವಳಿ ಕ್ಯಾಮೆರಾ ವಿಶೇಷ

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ ಹಿಂಬದಿಯಲ್ಲಿ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಫೋನ್ 158.5 x 73.3 x 8.4mm ಸುತ್ತಳತೆಯನ್ನು ಹೊಂದಿದ್ದು, 179g ತೂಕವನ್ನು ಪಡೆದಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ?

ಬೆಲೆ ಎಷ್ಟು ಮತ್ತು ಲಭ್ಯತೆ?

ರಿಯಲ್‌ಮಿ GT ನಿಯೋ ಸ್ಮಾರ್ಟ್‌ಫೋನ್‌‌ 6GB + 128GB ವೇರಿಯಂಟ್ ಬೆಲೆಯು ಚೀನಾದಲ್ಲಿ CNY 1,799 (ಭಾರತದಲ್ಲಿ ಅಂದಾಜು 20,100ರೂ. ಎನ್ನಲಾಗಿದೆ). ಅದೇ ರೀತಿ 8GB + 128GB ವೇರಿಯಂಟ್ ಬೆಲೆಯು ಚೀನಾದಲ್ಲಿ CNY 1,999 (ಭಾರತದಲ್ಲಿ ಅಂದಾಜು 22,400ರೂ) ಆಗಿದೆ. ಫ್ಯಾಂಟಸಿ, ಗೀಕ್ ಸಿಲ್ವರ್ ಮತ್ತು ಹ್ಯಾಕರ್ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Best Mobiles in India

English summary
Realme GT Neo With Triple Rear Camera Setup Launched: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+