ರಿಯಲ್‌ಮಿಯಿಂದ ಭಾರತದಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ ಅನಾವರಣ!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ರಿಯಲ್‌ಮಿ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ GT 5G ಮತ್ತು ರಿಯಲ್‌ಮಿ GT 5G ಮಾಸ್ಟರ್ ಎಡಿಶನ್ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಎರಡೂ ರಿಯಲ್‌ಮಿ ಫೋನ್‌ಗಳು 120Hz ಸೂಪರ್ AMOLED ಡಿಸ್‌ಪ್ಲೇಗಳೊಂದಿಗೆ ಬರುತ್ತವೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ GT ಮತ್ತು ರಿಯಲ್‌ಮೆ GT ಮಾಸ್ಟರ್ ಎಡಿಶನ್ ಅನ್ನು ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿವೆ. ಆದರೆ ರಿಯಲ್‌ಮಿ GT 5G ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದರೆ, GT 5G ಮಾಸ್ಟರ್ ಎಡಿಶನ್ ಮಧ್ಯಮ ಶ್ರೇಣಿಯ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ರಿಯಲ್‌ಮಿ GT 5G ವಿಶೇಷ

ರಿಯಲ್‌ಮಿ GT 5G ವಿಶೇಷ

ರಿಯಲ್‌ಮಿ GT 6.43 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ರಿಯಲ್‌ಮಿ GT ಮಾಸ್ಟರ್ ಎಡಿಶನ್‌ ವಿಶೇಷ

ರಿಯಲ್‌ಮಿ GT ಮಾಸ್ಟರ್ ಎಡಿಶನ್‌ ವಿಶೇಷ

ರಿಯಲ್‌ಮಿ GT ಮಾಸ್ಟರ್ ಎಡಿಶನ್‌ 6.43-ಇಂಚಿನ ಫುಲ್‌ ಹೆಚ್‌ಡಿ+ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಒಳಗೊಂಡಿದ್ದು, ಆಂಡ್ರಾಯ್ಡ್‌ 11ರ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS, NFC, ಮತ್ತು USB Type-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ GT ಬೆಲೆ ಬೇಸ್‌ ಮಾಡೆಲ್‌ 8GB + 128GB ಸ್ಟೋರೇಜ್ ರೂಪಾಂತರಕ್ಕೆ 37,999 ರೂ ಹಾಗೂ 12GB + 256GB ಸ್ಟೋರೇಜ್ ಮಾದರಿಗೆ 41,999ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್‌ ಡ್ಯಾಶಿಂಗ್ ಬ್ಲೂ ಮತ್ತು ಡ್ಯಾಶಿಂಗ್ ಸಿಲ್ವರ್ ಶೇಡ್‌ಗಳಲ್ಲಿ ಬರುತ್ತದೆ.
ರಿಯಲ್‌ಮಿ GT ಮಾಸ್ಟರ್ ಎಡಿಶನ್ ಸ್ಮಾರ್ಟ್‌ಫೋನ್‌ 6GB + 128GB ಸ್ಟೋರೇಜ್ ರೂಪಾಂತರಕ್ಕೆ 25,999.ರೂ ಹಾಗೂ 8GB + 128GB ಆಯ್ಕೆಗೆ 27,999 ರೂ, ಮತ್ತು 8GB + 256GB ಸ್ಟೋರೇಜ್ ಆಯ್ಕೆಗೆ 29,999ರೂ, ಬೆಲೆಯನ್ನು ಹೊಂದಿದೆ. ಈ ಫೋನ್ ಕಾಸ್ಮೋಸ್ ಬ್ಲೂ ಮತ್ತು ಲೂನಾ ವೈಟ್ ಬಣ್ಣಗಳನ್ನು ಹೊಂದಿದೆ. ಆಗಸ್ಟ್ 25 ರಿಂದ ರಿಯಲ್‌ಮಿ GT ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಹಾಗೆಯೇ ಮಾಸ್ಟರ್ ಆವೃತ್ತಿ ಆಗಸ್ಟ್ 26 ರಿಂದ ಪ್ರಾರಂಭವಾಗುತ್ತದೆ.

Best Mobiles in India

English summary
Realme GT price in India starts at Rs. 37,999, while Realme GT Master Edition carries a starting price of Rs. 25,999.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X