ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌!

|

ರಿಯಲ್‌ಮಿ ಕಂಪೆನಿ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ರಿಯಲ್‌ಮಿ ಕಂಪೆನಿ ತನ್ನ ಅಲ್ಟ್ರಾ ಪ್ರೀಮಿಯಂ ಫೋನ್ ರಿಯಲ್‌ಮಿ GT 2 ಪ್ರೊ ಅನ್ನು ಭಾರತದಲ್ಲಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ರಿಯಲ್‌ಮಿ ಇಂಡಿಯಾ ಸಿಇಒ ಮಾಧವ್ ಶೇಠ್‌ ದೃಡಪಡಿಸಿದ್ದಾರೆ. ಆದರೆ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ GT 2 ಪ್ರೊ ಫೋನ್‌ ಅನ್ನು ಶೀಘ್ರದಲ್ಲೇ ಲಾಂಚ್‌ ಮಾಡಲಿದೆ. ಈಗಾಗಲೇ ರಿಯಲ್‌ಮಿ ಕಂಪೆನಿ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ್ದು, "ಕಾಯುವಿಕೆ ಮುಗಿದಿದೆ!" ಎಂದು ಅಡಿಬರಹ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯಲ್‌ಮಿ ಕಂಪೆನಿಯ ಪ್ರೀಮಿಯಂ ಸ್ಮಾರ್ಟ್‌ಫೋನ್‌ ಆಗಿದ್ದು ಈಗಾಗಲೇ ಯುರೋಪ್‌ ರಾಷ್ಟ್ರಗಳಲ್ಲಿ ಬಿಡುಗಡೆ ಆಗಿದೆ. ಹಾಗಾದ್ರೆ ಭಾರತದಲ್ಲಿ ಬಿಡುಗಡೆ ಆಗಲಿರುವ ಹೊಸ ರಿಯಲ್‌ಮಿ GT 2 ಪ್ರೊ ಫೋನಿನ ವಿಶೇಷತೆ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 3216x1440 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಸ್ಯಾಮ್‌ಸಂಗ್‌ OLED LTPO ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ "ಅಡಾಪ್ಟಿವ್ ರಿಫ್ರೆಶ್ ರೇಟ್" ಅನ್ನು ಬೆಂಬಲಿಸುತ್ತದೆ. ಇದು ವಿಷಯಕ್ಕೆ ಅನುಗುಣವಾಗಿ ರಿಫ್ರೆಶ್ ರೇಟ್‌ ಅನ್ನು ಸೆಟ್‌ ಮಾಡಲು ಸ್ಕ್ರೀನ್‌ಗೆ ಅನುಮತಿಸುತ್ತದೆ. ಇನ್ನು ಈ ಡಿಸ್‌ಪ್ಲೇ 1400 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 ಫ್ಲ್ಯಾಗ್‌ಶಿಪ್ ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ.

ಕ್ಯಾಮೆರಾ

ಕ್ಯಾಮೆರಾ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 3 ಮೆಗಾಪಿಕ್ಸೆಲ್ ಮೈಕ್ರೋಸ್ಕೋಪ್ ಲೆನ್ಸ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 65W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊ ಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌, ಕಲರ್‌ ಸ್ಪೆಕ್ಟ್ರಂ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಅಂದಾಜು 46,600ರೂ.ಬೆಲೆಯಲ್ಲಿ ಬರುವ ಸಾಧ್ಯತೆ ಇದೆ. ಇದು ಈಗಾಗಲೇ ಯುರೋಪಿಯನ್ ಮಾರುಕಟ್ಟೆಯಲ್ಲಿ EUR 449 ಬೆಲೆಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಕಲರ್‌ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Realme has announced that the GT 2 Pro is coming soon in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X