ಮಾರುಕಟ್ಟೆಯಲ್ಲಿ ಬಿರುಗಾಳಿ ಸೃಷ್ಟಿಸಿದ ರಿಯಲ್‌ಮಿ ಪ್ರಾಜೆಕ್ಟ್ N? ಏನಿದು ಪ್ರಾಜೆಕ್ಟ್ N?
ಸ್ಮಾರ್ಟ್‌ಫೋನ್ ಮಾರುಕಟ್ಟೆಯ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದು. ರಿಯಲ್‌ಮಿ ಕಂಪೆನಿಯ ನಾರ್ಜೋ ಶ್ರೇಣಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಇದೀಗ ರಿಯಲ್‌ಮಿ ಕಂಪೆನಿ ಸ್ಮಾರ್ಟ್‌ಫೋನ್ ವಲಯದಲ್ಲಿ ಹೊಸದೊಂದು ಸಂಚಲನ ಸೃಷ್ಟಿಸಿದೆ. ಇದಕ್ಕಾಗಿ ಹೊಸ ಎನ್ ಪ್ರಾಜೆಕ್ಟ್ ಅನ್ನು ಘೋಷಣೆ ಮಾಡಿದೆ.
ಹೌದು, ರಿಯಲ್‌ಮಿ ಕಂಪೆನಿ ಹೊಸದಾಗಿ ರಿಯಲ್‌ಮಿ ಪ್ರಾಜೆಕ್ಟ್ N ಅನ್ನು ಘೋಷಣೆ ಮಾಡಿದೆ. ರಿಯಲ್‌ಮಿ ಪ್ರಾಜೆಕ್ಟ್ N ಘೋಷಣೆ ಮಾಡ್ತಿದ್ದ ಹಾಗೇ ಮಾರುಕಟ್ಟೆಯಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ. ಹಾಗಾದ್ರೆ ಏನಿದು ರಿಯಲ್‌ಮಿ ಪ್ರಾಜೆಕ್ಟ್ N? ಇದರಲ್ಲಿ ಯಾವ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗುತ್ತದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏನಿದು ರಿಯಲ್‌ಮಿ ಪ್ರಾಜೆಕ್ಟ್ N? ನಿರೀಕ್ಷೆ ಏನು?
ರಿಯಲ್‌ಮಿ ಪ್ರಾಜೆಕ್ಟ್ N ಎಂದರೆ ಹೊಸ ನಾರ್ಜೊ ಸ್ಮಾರ್ಟ್‌ಫೋನ್‌ಗಳ ಸರಣಿ ಎಂದು ವರದಿಯಾಗಿದೆ. ಈ ನಾರ್ಜೊ ಫೋನ್‌ಗಳು ಹೊಸ-ಜನ್ ಆವಿಷ್ಕಾರಗಳನ್ನು ಹೊಂದಿರುತ್ತವೆ ಎಂದು ಹೇಳಲಾಗಿದೆ. ಆದರೆ ಈ ಸರಣಿಯಲ್ಲಿ ಬರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬ ಯಾವುದೇ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಅದಾಗ್ಯೂ ಈ ಪ್ರಾಜೆಕ್ಟ್ N ಮೂಲಕ ರಿಯಲ್‌ಮಿ ಕಂಪೆನಿ ಹೊಸ ನಾರ್ಜೊ N55 ಸ್ಮಾರ್ಟ್‌ಫೋನ್ ಪರಿಚಯಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ರಿಯಲ್‌ಮಿ ಕಂಪೆನಿ ಪರಿಚಯಿಸಲಿದೆ ಎನ್ನಲಾಗಿರುವ ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್‌ಪ್ಲೇ ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದು 120 Hz ರಿಫ್ರೆಶ್ ರೇಟ್ ಬೆಂಬಲಿಸಬಹುದು. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಹಾಗೆಯೇ 4GB RAM ಮತ್ತು 128GB, 6GB RAM ಮತ್ತು 64GB, ಹಾಗೂ 6GB RAM ಮತ್ತು 128GB ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ.

ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ನಲ್ಲಿ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಪ್ರೈಮ್ ಬ್ಲಾಕ್ ಮತ್ತು ಪ್ರೈಮ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ವರದಿಯಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ನ ನಿಖರ ಫೀಚರ್ಸ್ ವಿವರ ಶೀಘ್ರದಲ್ಲೇ ಬಹಿರಂಗವಾಗುವ ಸಾಧ್ಯತೆಯಿದೆ.
ಇದಲ್ಲದೆ ರಿಯಲ್‌ಮಿ ಕಂಪೆನಿ ಇತ್ತೀಚಿಗೆ 240W ವೇಗದ ಚಾರ್ಜಿಂಗ್ ಬೆಂಬಲಿಸುವ ರಿಯಲ್‌ಮಿ GT ನಿಯೋ 5 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 4600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ GT ನಿಯೋ 5 ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ಅಡಾಪ್ಟಿವ್ ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








