ಭಾರತದಲ್ಲಿ ರಿಯಲ್‌ಮಿ 10 ಸರಣಿ ಬೆಲೆ ಎಷ್ಟಿರಬಹುದು? ನಿರೀಕ್ಷೆ ಏನು?
ಬಹು ನಿರೀಕ್ಷಿತ ರಿಯಲ್‌ಮಿ 10 ಸರಣಿ ಬಾರತಕ್ಕೆ ಎಂಟ್ರಿ ನೀಡೋದು ಪಕ್ಕಾ ಆಗಿದೆ. ಈಗಾಗಲೇ ಲಾಂಚ್ ಡೇಟ್ ಫಿಕ್ಸ್ ಮಾಡಿರುವ ರಿಯಲ್‌ಮಿ ಕಂಪೆನಿ ಇದೀಗ ಭಾರತದಲ್ಲಿ ರಿಯಲ್‌ಮಿ 10 ಸರಣಿಯ ಬೆಲೆ ವಿವರಗಳನ್ನು ಬಹಿರಂಗಪಡಿಸಿದೆ. ಈ ಸ್ಮಾರ್ಟ್‌ಫೋನ್ ಸರಣಿ ಇದೇ ಡಿಸೆಂಬರ್ 8 ರಂದು ಲಾಂಚ್ ಆಗಲಿದೆ. ಇದೀಗ ಬಿಡುಗಡೆಗೂ ಮುನ್ನವೇ ರಿಯಲ್‌ಮಿ ಇಂಡಿಯಾದ ಅಧ್ಯಕ್ಷ ಮಾಧವ್ ಶೇಠ್ ಅವರು ರಿಯಲ್‌ಮಿ 10 ಪ್ರೊ + ಬೆಲೆಯ ವಿವರಗಳ ಮಾಹಿತಿ ಹಂಚಿಕೊಂಡಿದ್ದಾರೆ.

ಹೌದು, ರಿಯಲ್‌ಮಿ 10 ಸರಣಿಯ ಫೋನ್‌ಗಳ ಬೆಲೆ ವಿವರ ಭಾರತದಲ್ಲಿ ಬಹಿರಂಗವಾಗಿದೆ. ಈ ಸರಣಿಯಲ್ಲಿ ರಿಯಲ್‌ಮಿ 10 ಪ್ರೊ ಮತ್ತು ರಿಯಲ್‌ಮಿ 10 ಪ್ರೊ+ ಸ್ಮಾರ್ಟ್‌ಫೋನ್ ಲಾಂಚ್ ಆಗಲಿವೆ ಎನ್ನಲಾಗಿದೆ. ಮಾಧವ್ ಶೇಠ್ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ರಿಯಲ್‌ಮಿ 10 ಪ್ರೊ+ ನ ಬೆಲೆಯನ್ನು ಟೀಸ್ ಮಾಡಿದ್ದಾರೆ. ಟ್ವೀಟ್‌ನಲ್ಲಿ ಎಂಬೆಡ್ ಮಾಡಲಾದ ಶಾರ್ಟ್ ವೀಡಿಯೊದ ಮೂಲಕ ಬೆಲೆಯ ಸುಳಿವು ನೀಡಿದ್ದಾರೆ. ಹಾಗಾದ್ರೆ ರಿಯಲ್‌ಮಿ 10 ಸರಣಿಯ ಸ್ಮಾರ್ಟ್‌ಫೋನ್ ಬೆಲೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬೆಲೆಯ ಬಗ್ಗೆ ನಿರೀಕ್ಷೆ ಏನು?
ರಿಯಲ್‌ಮಿ 10 ಸರಣಿ ಸ್ಮಾರ್ಟ್‌ಫೋನ್‌ನ ಬೆಲೆ 25000ರೂ.ಕ್ಕಿಂತ ಕಡಿಮೆ ಇರಲಿದೆ ಎಂದು ಸುಳಿವು ನೀಡಲಾಗಿದೆ. ಇದರಿಂದ ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಮಧ್ಯಮ ಶ್ರೇಣಿಯಲ್ಲಿ ಬರುವ ಸಾಧ್ಯತೆಯಿದೆ. ಇನ್ನು ಈಗಾಗಲೇ ಬಹಿರಂಗವಾಗಿರುವಂತೆ ಈ ಸ್ಮಾರ್ಟ್‌ಫೋನ್ ಸರಣಿ ಇದೇ ಡಿಸೆಂಬರ್ 8 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆಯ ನಂತರ ಇದರ ಅಧಿಕೃತ ಬೆಲೆ ವಿವರ ತಿಳಿಯಲಿದೆ.

ರಿಯಲ್‌ಮಿ 10 ಪ್ರೊ ಪ್ಲಸ್ ಫೀಚರ್ಸ್ ಹೇಗಿದೆ?
ರಿಯಲ್‌ಮಿ 10 ಪ್ರೊ ಪ್ಲಸ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 360 Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಸಹ ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಹೊಂದಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್, ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ರಿಯಲ್‌ಮಿ 10 ಪ್ರೊ ಫೀಚರ್ಸ್ ಹೇಗಿದೆ?
ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2MP ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.


Click it and Unblock the Notifications








