ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ರಿಯಲ್‌ಮಿ GT ನಿಯೋ 3T ! ವಿಶೇಷತೆ ಏನು?

|

ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಒಳ್ಳೆಯ ಪ್ರತಿಕ್ರಿಯೆಯಿದೆ. ತನ್ನ ವಿಶೇಷ ಡಿವೈಸ್‌ಗಳ ಮೂಲಕ ಭಾರತದಲ್ಲಿ ಏರುಗತಿಯಲ್ಲಿ ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಾ ಸಾಗಿದೆ. ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ರಿಯಲ್‌ಮಿ ಇದೀಗ ಹೊಸ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ಬಗ್ಗೆ ಟೀಸರ್‌ ಅನ್ನು ಪೋಸ್ಟ್‌ ಮಾಡಿದ್ದು, ಲಾಂಚ್‌ ಡೇಟ್‌ ಅನ್ನು ಬಹಿರಂಗಪಡಿಸಿಲ್ಲ.

ರಿಯಲ್‌ಮಿ GT ನಿಯೋ 3T

ಹೌದು, ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ಬಗ್ಗೆ ಅಧಿಕೃತ ಟೀಸರ್‌ ಅನ್ನು ರಿಯಲ್‌ಮಿ ಕಂಪೆನಿ ಬಹಿರಂಗಪಡಿಸಿದೆ. ಇನ್ನು ಈ ಟೀಸರ್‌ನಲ್ಲಿ ಈ ಸ್ಮಾರ್ಟ್‌ಫೋನ್‌ 80W ವೇಗದ ಚಾರ್ಜಿಂಗ್‌ ಬೆಂಬಲಿಸುವ ಬಗ್ಗೆ ಮಾಹಿತಿ ನೀಡಿದೆ. ಅಲ್ಲದೆ ಇದು ಬೂದು ಬಣ್ಣದ ರೂಪಾಂತರದಲ್ಲಿ ಲಭ್ಯವಿರುತ್ತದೆ ಎಂದು ದೃಢಪಡಿಸಿದೆ. ಹಾಗಾದ್ರೆ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 6.2 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆಯಿದೆ. ಇದು 120 Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ 1300 ನಿಟ್ಸ್‌ ಬ್ರೈಟ್‌ನೆಸ್‌, 100% DCI-P3 ವೈಡ್ ಕಲರ್ ಗ್ಯಾಮಟ್, 106% NTSC ಕಲರ್ ಗ್ಯಾಮಟ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ ಗಾರ್ನಿಂಗ್‌ ಲೆವೆಲ್‌ ಡೈಮಿಂಗ್ ಪ್ರೊಟೆಕ್ಷನ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 12-ಆಧಾರಿತ ರಿಯಲ್‌ಮಿ UI 3.0 ಕಸ್ಟಮ್ ಸ್ಕಿನ್‌ನಲ್ಲಿ ರನ್ ಆಗಲಿದೆ. ಹಾಗೆಯೇ ಆಂಡ್ರೆನೊ 650 GPU ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನ್‌ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿರಲಿದೆ?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಚಾಟ್‌ಗಳಿಗಾಗಿ 16 ಮೆಗಾಫಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನಿರಲಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಏನಿರಲಿದೆ?

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿರಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 6, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ. ಇದಲ್ಲದೆ ಡಾಲ್ಬಿ ಅಟ್ಮೋಸ್‌, ಹೈ-ರೆಸ್ ಆಡಿಯೋ, VC ಕೂಲಿಂಗ್ ಮತ್ತು ಭದ್ರತೆಗಾಗಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಅಳವಡಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಭಾರತದಲ್ಲಿ ಅಂದಾಜು 30,000ರೂ. ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಆಗುವುದು ಅಧಿಕೃತವಾಗಿದ್ದು, ಬಿಡುಗಡೆಯ ದಿನಾಂಕ ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡೋದು ಪಕ್ಕಾ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬೂದು ಬಣ್ಣದ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಇದು ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಅಲ್ಲದೆ ಈ ವರ್ಷದ ಆರಂಭದಲ್ಲಿಯೇ ಚೀನಾದಲ್ಲಿ ಲಾಂಚ್‌ ಆಗಿದೆ. ಆದರಿಂದ ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆಯನ್ನು ಇಡಲಾಗಿದೆ.

Best Mobiles in India

English summary
The official teaser does not reveal the actual launch date of the smartphone, but confirms that it is “coming soon”.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X