ಭಾರತದಲ್ಲಿ ರಿಯಲ್‌ಮಿ 9i 5G ಫೋನ್‌ ಬಿಡುಗಡೆ ದಿನಾಂಕ ಬಹಿರಂಗ!

|

ಭಾರತದ ಮಾರುಕಟ್ಟೆಯಲ್ಲಿ ಜನಪ್ರಿಯತೆ ಸಾಧಿಸಿರುವ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದು. ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ದತೆ ನಡೆಸಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ 9i 5G ಫೋನ್‌ ಬಿಡುಗಡೆಗೆ ವೇದಿಕೆ ಸಿದ್ದಪಡಿಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್ 18, ರಂದು 11:30AM ಕ್ಕೆ ವಿಶೇಷ ಲಾಂಚ್‌ ಈವೆಂಟ್‌ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ 810 5G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಲೇಸರ್ ಲೈಟ್ ಫಿನಿಶ್ ಮತ್ತು ಯುನಿಬಾಡಿ ವಿನ್ಯಾಸವನ್ನು ಹೊಂದಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ HD+ LCD ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 393 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿರಲಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ 810 5G ಪ್ರೊಸೆಸರ್‌ ಬಲವನ್ನು ಪಡೆದಿರಲಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ ರಿಯಲ್‌ಮಿ UI 2.o ಅನ್ನು ರನ್ ಮಾಡುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಲೇಸರ್ ಲೈಟ್ ಫಿನಿಶ್ ಮತ್ತು ಯುನಿಬಾಡಿ ವಿನ್ಯಾಸವನ್ನು ಹೊಂದಿದೆ ಎಂದು ಕಂಪೆನಿ ಮಾಹಿತಿ ಬಹಿರಂಗಪಡಿಸಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಬೆಲೆ 15,000ರೂ. ಮತ್ತು 20,000ರೂ ನಡುವೆ ಇರುತ್ತದೆ. ಇನ್ನು ಈ ಫೋನ್‌ ಗೋಲ್ಡ್ ಕಲರ್ ರೂಪಾಂತರದಲ್ಲಿ ಬರುತ್ತದೆ ಎಂದು ಬಹಿರಂಗಪಡಿಸಿದೆ. ಆದಾಗ್ಯೂ, ಟಿಪ್‌ಸ್ಟರ್ ಸುಧಾಂಶು ಅಂಬೋರ್ ಹಂಚಿಕೊಂಡಿರುವ ಮಾಹಿತಿ ಪ್ರಕಾರ ಕಪ್ಪು ಬಣ್ಣದ ರೂಪಾಂತರವನ್ನು ಪರಿಚಯಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಇನ್ನು ಈ ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಹೇಗಿರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ.

Best Mobiles in India

Read more about:
English summary
Realme is all set to launch a new 5G smartphone in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X