Realme Narzo 10: ರಿಯಲ್‌ಮಿ ನಾರ್ಜೊ 10, ನಾರ್ಜೊ 10A ಸ್ಮಾರ್ಟ್‌ಫೋನ್ ಲಾಂಚ್!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಮಾರುಕಟ್ಟೆಗೆ ಎಂಟ್ರಿ ನೀಡಿದ ಕೆಲವೇ ವರ್ಷಗಳಲ್ಲಿಯೇ ಭಾರಿ ಜನಪ್ರಿಯತೆಯನ್ನ ಗಳಿಸಿರುವ ರಿಯಲ್‌ಮಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ನಿಮಗೆಲ್ಲಾ ತಿಳಿದಿರುವಂತೆ ಈಗಾಗಲೇ ರಿಯಲ್‌ಮಿ ತನ್ನ ನಾರ್ಜೊ ಸರಣಿಯ ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಬಗ್ಗೆ ಮಾಹಿತಿ ನೀಡಿತ್ತು ಅಲ್ಲದೆ ಇದರ ಫೀಚರ್ಸ್ ಕೂಡ ರಿವೀಲ್ ಆಗಿತ್ತು. ಸದ್ಯ ಇದೀಗ ರಿಯಲ್‌ಮಿ ನಾರ್ಜೊ 10 ಮತ್ತು ನಾರ್ಜೊ 10A ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

ಹೌದು, ರಿಯಲ್‌ಮಿ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ಹೊಸ ರಿಯಲ್‌ಮಿ ನಾರ್ಜೊ 10 ಮತ್ತು ರಿಯಲ್‌ಮಿ 10A ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ರಿಯಲ್‌ಮಿ ನಾರ್ಜೋ ಸ್ಮಾರ್ಟ್‌ಫೋನ್ ರಿಯಲ್‌ಮಿ 6i ಯ ಮರುಬ್ರಾಂಡೆಡ್ ಆವೃತ್ತಿಯಾಗಿದೆ. ಇನ್ನು ರಿಯಲ್‌ಮಿ ನಾರ್ಜೋ 10A, ರಿಯಲ್‌ಮಿ c3 ಥೈಲ್ಯಾಂಡ್ ಮಾದರಿಯ ಮರುಬ್ರಾಂಡೆಡ್ ಆವೃತ್ತಿಯಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ 10 ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ ಪ್ಲಸ್ ಆಗಿದ್ದು ಮಿನಿ ಡ್ರಾಪ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನ ಹೊಂದಿದ್ದು, 89.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ನಿಂದ ಪ್ರೊಟೆಕ್ಷನ್ ಅನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 10 ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಹೊಂದಿದ್ದು,ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಮಾಲಿ G52GPU ಅನ್ನು ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್ ಸ್ಟೊರೇಜ್ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ, ಇದು 119 ಡಿಗ್ರಿಗಳಷ್ಟು ಫೀಲ್ಡ್-ಆಫ್-ವ್ಯೂ ಹೊಂದಿದೆ.ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಸೆಲ್ಫಿ ಕ್ಯಾಮೆರಾ 30fps ಫ್ರೇಮ್ ರೇಟ್ ನಲ್ಲಿ ಎಚ್‌ಡಿ (720p) ವಿಡಿಯೋ ರೆಕಾರ್ಡಿಂಗ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ, ಅಲ್ಲದೆ ಇದು 18W ಕ್ವಿಕ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ರಿಯಲ್ಮೆ ನಾರ್ಜೊ 10A
ರಿಯಲ್‌ಮಿ ನಾರ್ಜೊ 10A ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 20: 9ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ ಇದು 3GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.ಇನ್ನು ನಾರ್ಜೊ 10A ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಭಾರತದಲ್ಲಿ ರಿಯಲ್‌ಮಿ ನರ್ಜೋ 10 ಬೆಲೆ 11,999 ರೂ.ಆಗಿದ್ದು, ಈ ಸ್ಮಾರ್ಟ್‌ಫೋನ್ ದಟ್ ಗ್ರೀನ್ ಮತ್ತು ದಟ್ ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.ಅಲ್ಲದೆ ರಿಯಲ್‌ಮಿ ನಾರ್ಜೊ 10A ಸ್ಮಾರ್ಟ್‌ಫೋನ್ 8,499 ರೂ.ಬೆಲೆಯನ್ನ ಹೊಂದಿದ್ದು, ಸೋ ಬ್ಲೂ ಮತ್ತು ಸೋ ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಫ್ಲಿಪ್ಕಾರ್ಟ್ ಮತ್ತು ರಿಯಲ್‌ಮಿ.ಕಾಮ್ ತಾಣಗಳಲ್ಲಿ ಖರೀದಿಗೆ ಲಭ್ಯವಿವೆ.


Click it and Unblock the Notifications




