Realme Narzo 10: ಲಾಂಚ್‌ ಆಗಲಿದೆ ರಿಯಲ್‌ಮಿ ನಾರ್ಜೊ 10 ಸರಣಿಯ ಸ್ಮಾರ್ಟ್‌ಫೋನ್‌!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ಸಾಕಷ್ಟು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಅಲ್ಲದೆ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇರುತ್ತವೆ. ಸದ್ಯ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಸಾಕಷ್ಟು ಸೌಂಡ್‌ ಮಾಡುತ್ತಿವೆ. ಇನ್ನು ಸ್ಮಾರ್ಟ್‌ಫೋನ್‌ ಪ್ರಿಯರು ಮಾತ್ರ ತಮ್ಮ ನೆಚ್ಚಿನ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ. ಸದ್ಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಕೆಲವೇ ವರ್ಷಗಳಲ್ಲಿಯೇ ಸಾಕಷ್ಟು ಪ್ರಖ್ಯಾತಿ ಗಳಿಸಿರುವ ರಿಯಲ್‌ ಮಿ ಕೂಡ ಗ್ರಾಹಕರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದ್ದು, ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗ ಸಿದ್ದತೆ ನಡೆಸಿದೆ.

ಹೌದು

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸಾಕಷ್ಟು ಏರುಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿರುವ ರಿಯಲ್‌ಮಿ ತನ್ನ ಹೊಸ ರಿಯಲ್‌ಮಿ ನಾರ್ಜೊ 10 ಮತ್ತು ನಾರ್ಜೊ 10A ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡುವುದಕ್ಕೆ ವೇದಿಕೆ ಸಿದ್ದ ಪಡಿಸಿಕೊಳ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಯಲ್ಲಿ ಇದೇ ಮೇ 11 ರಂದು ಲಾಂಚ್‌ ಆಗಲಿದೆ ಎನ್ನಲಾಗ್ತಿದೆ. ಇದಕ್ಕೆ ಸಂಬಂಧಿಸಿದಂತೆ ರಿಯಲ್‌ಮಿ ಕಂಪೆನಿಯು ನಾರ್ಜೊ 10 ಸರಣಿಯ ಸ್ಮಾರ್ಟ್‌ಫೋನ್‌ಗಳ ಲಾಂಚ್‌ ಕಾರ್ಯಕ್ರಮವು ಮೇ 11 ರಂದು ಮಧ್ಯಾಹ್ನ 12: 30 ಕ್ಕೆ ಪ್ರಾರಂಭವಾಗಲಿದೆ ಎಂದು ಘೋಷಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಲೀಕ್‌ ಆಗಿದ್ದು, ಲೀಕ್‌ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ 10

ರಿಯಲ್‌ಮಿ ನಾರ್ಜೊ 10

ಸದ್ಯ ಲೀಕ್‌ ಮಾಹಿತಿ ಪ್ರಕಾರ ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದೆ ಎನ್ನಲಾಗ್ತಿದೆ. ಇನ್ನು ಈ ಡಿಸ್‌ಪ್ಲೇಯು 270PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿದ್ದು, IPS LCD ವಿನ್ಯಾಸವನ್ನ ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20.9 ರಚನೆಯ ಅನುಪಾತವನ್ನ ಹೊಂದಿರಲಿದೆ ಎನ್ನಲಾಗ್ತಿದೆ.

ರಿಯಲ್‌ಮಿ ನಾರ್ಜೊ 10 ಪ್ರೊಸೆಸರ್‌

ರಿಯಲ್‌ಮಿ ನಾರ್ಜೊ 10 ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಮಿಡಿಯಾ ಟೆಕ್‌ ಹಿಲಿಯೋ G80 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM + 64GB ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿರಲಿದೆ ಎನ್ನಲಾಗ್ತಿದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, ವೈಡ್‌ ಆಂಗಲ್‌, ಅಲ್ಟ್ರಾ ವೈಡ್‌ ಆಂಗಲ್‌ ಕ್ಯಾಮೆರಾ ಹೊಂದಿದೆ. ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನೊ ಹೊಂದಿದೆ ಎನ್ನಲಾಗ್ತಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎನ್ನಲಾಗ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 10,000 ರಿಂದ 15,000 ರೂ.ಗೆ ಲಭ್ಯವಾಗುವ ಸಾಧ್ಯತೆ ಇದೆ.

ಇತರೆ

ಇತರೆ

ರಿಯಲ್‌ಮಿ ನಾರ್ಜೊ 10A ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ನಾಚ್‌ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಜೊತೆಗೆ ಎ ಕ್ಲಾಸ್ ಪ್ರೊಸೆಸರ್ ಅನ್ನು ಈ ಸ್ಮಾರ್ಟ್‌ಫೋನ್‌ ಹೊಂದಿದ್ದು, ಗೇಮಿಂಗ್‌ಗೆ ಸೂಕ್ತವಾದ ವಿನ್ಯಾಸವನ್ನ ಮಾಡಲಾಗಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ನಾರ್ಜೊ 10 ಹೊಂದಿರುವ ಫೀಚರ್ಸ್‌ಗಳನ್ನೇ ಹೊಂದಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Realme Narzo 10 and Narzo 10A smartphones India launch will now take place on May 11.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X