ಇಂದು ರಿಯಲ್‌ಮಿ Narzo 10 ಸ್ಮಾರ್ಟ್‌ಫೋನ್ ಸೇಲ್!
ಅಗ್ಗದ ಬೆಲೆಯಲ್ಲಿ ಆಕರ್ಷಕ ಫೀಚರ್ಸ್‌ಗಳ ಫೋನ್‌ಗಳಿಂದ ಗುರುತಿಸಿಕೊಂಡಿರುವ ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಮಾರುಕಟ್ಟೆಗೆ ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ ಸರಣಿಯನ್ನು ಅನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿನ ಬಜೆಟ್ ಬೆಲೆಯ ರಿಯಲ್‌ಮಿ Narzo 10 ಸ್ಮಾರ್ಟ್‌ಫೋನ್ ಇಂದು (ಆ.4) ಮಧ್ಯಾಹ್ನ 12ಗಂಟೆಗೆ ಫ್ಲಿಪ್‌ಕಾರ್ಟ್ ಹಾಗೂ ರಿಯಲ್ ಮಿ ವೆಬ್‌ಸೈಟ್ ಮೂಲಕ ಸೇಲ್ ಕಾಣಲಿದೆ.

ಈ ರಿಯಲ್‌ಮಿ Narzo 10 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ 5ಎಂಪಿಯ 16 ಮೆಗಾಪಿಕ್ಸೆಲ್ ಸೆನ್ಸಾರ್ ನ ಸೆಲ್ಫಿ ಕ್ಯಾಮೆರಾ ಪಡೆದಿದ್ದು, 5000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಈ ಫೋನಿನ ಆರಂಭಿಕ (4GB + 128GB) ಬೆಲೆಯು 11,999ರೂ.ಗಳಾಗಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಈ ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ ಪ್ಲಸ್ ಆಗಿದ್ದು ಮಿನಿ ಡ್ರಾಪ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನ ಹೊಂದಿದ್ದು, 89.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ನಿಂದ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಬಲ
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಹೊಂದಿದ್ದು,ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಮಾಲಿ G52GPU ಅನ್ನು ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್ ಸ್ಟೊರೇಜ್ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ, ಇದು 119 ಡಿಗ್ರಿಗಳಷ್ಟು ಫೀಲ್ಡ್-ಆಫ್-ವ್ಯೂ ಹೊಂದಿದೆ.ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಸೆಲ್ಫಿ ಕ್ಯಾಮೆರಾ 30fps ಫ್ರೇಮ್ ರೇಟ್ ನಲ್ಲಿ ಎಚ್‌ಡಿ (720p) ವಿಡಿಯೋ ರೆಕಾರ್ಡಿಂಗ್ ಅನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಪವರ್
ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಪಡೆದಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಬ್ಲೂಟೂತ್, ವೈಫೈ, ಜಿಪಿಎಸ್, ಸೆನ್ಸಾರ್‌ನಂತಹ ಅಗತ್ಯ ಸೌಲಭ್ಯಗಳನ್ನು ಪಡೆದಿದೆ.


Click it and Unblock the Notifications








