Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಇಂದು ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ ಸೇಲ್!

ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಮಾರುಕಟ್ಟೆಗೆ ಪರಿಚಯಿಸಿರುವ ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ ಜೂನ್‌ನಲ್ಲಿ ಒಮ್ಮೆ ಮಾರಾಟ ಕಂಡಿತ್ತು. ಈ ಫೋನ್ ಇಂದು (ಜುಲೈ 3) ಮಧ್ಯಾಹ್ನ 12ಗಂಟೆಗೆ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ ಮೂಲಕ ಮತ್ತೆ ಸೇಲ್ ನಡೆಸಲಿದೆ. ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಹಾಗೂ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.

ರಿಯಲ್‌ಮಿ

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸೇಲ್ ನಡೆಸಲಿದ್ದು, ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 8,999ರೂ.ಗಳಾಗಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G70 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಆಂಡ್ರಾಯ್ಡ್ 10 ಓಎಸ್‌ ಸಪೋರ್ಟ್‌ ಪಡೆದಿದೆ. ತ್ರಿವಳಿ ಕ್ಯಾಮೆರಾ ರಚನೆಯಲ್ಲಿ ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 5ಎಂಪಿಯ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ ಪ್ಲಸ್‌ ಆಗಿದ್ದು ಮಿನಿ ಡ್ರಾಪ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್‌ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ನಿಂದ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ವಿಡಿಯೊ ವೀಕ್ಷಣೆಗೆ ಡಿಸ್‌ಪ್ಲೇ ಅತ್ಯುತ್ತಮವಾಗಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೆ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಇಂಟರ್‌ನಲ್ ಸ್ಟೊರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಮೂರನೇ ಕ್ಯಾಮೆರಾ ಸಹ 2 ಮೆಗಾಪಿಕ್ಸೆಲ್ ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬಿಗ್ ಬ್ಯಾಟರಿ

ಬಿಗ್ ಬ್ಯಾಟರಿ

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 4G LTE, ವೈ-ಫೈ, ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆಗಳು ಸೇರಿವೆ. 164.4x75x8.95mm ಸುತ್ತಳತೆ ಪಡೆದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ ಬೆಲೆ 8,499ರೂ.ಆಗಿದ್ದು, ಆದ್ರೆ 500ರೂ. ಹೆಚ್ಚಳ ಕಂಡು ಫ್ಲಿಪ್‌ಕಾರ್ಟ್‌ನಲ್ಲಿ 8,999ರೂ.ಪ್ರೈಸ್‌ಟ್ಯಾಗ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬ್ಲೂ ಮತ್ತು ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ಗಳು ಇಂದು ಫ್ಲಿಪ್‌ಕಾರ್ಟ್‌ ತಾಣಗಳಲ್ಲಿ ಖರೀದಿಗೆ ಲಭ್ಯವಿವೆ.

Best Mobiles in India

English summary
Realme Narzo 10A price in India is set at Rs 8,499 and it features a triple rear camera setup, a 5,000mAh battery.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+