ರಿಯಲ್‌ಮಿ ನಾರ್ಜೊ 10a ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಫೀಚರ್ಸ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದ್ದು, ಏರುಗತಿಯಲ್ಲಿ ಪ್ರಸಿದ್ದಿ ಪಡೆಯುತ್ತಿರುವ ಸ್ಮಾರ್ಟ್‌ಫೋನ್ ಕಂಪೆನಿಗಳಲ್ಲಿ ಒಂದಾಗಿದೆ. ಸದ್ಯ ತನ್ನ ಮಾರುಕಟ್ಟೆ ಪ್ರಾಬಲ್ಯವನ್ನ ಇನ್ನಷ್ಟು ವಿಸ್ತರಿಸಿಕೊಳ್ಳಲು ಸಿದ್ದತೆ ನಡೆಸಿರುವ ರಿಯಲ್‌ಮಿ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ ನರ್ಜೋ 10A 4GB RAM ಸಾಮರ್ಥ್ಯದ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ದೊಡ್ಡ ಗಾತ್ರದ ಅಂದರೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 6.5-ಇಂಚಿನ ವಾಟರ್‌ಡ್ರಾಪ್ ನಾಚ್ ಡಿಸ್‌ಪ್ಲೇಯನ್ನ ಹೊಂದಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ ನಾರ್ಜೊ 10a ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದಲ್ಲದೆ ವೀಡಿಯೊ ವೀಕ್ಷಣೆ ಹಾಗೂ ವೀಡಿಯೋ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ವರೆಗೆ ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ರಿಯಲ್‌ಮಿ ನಾರ್ಜೊ 10a ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಅಲ್ಲದೆ ಇದು ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ ನಾರ್ಜೊ 10a ಸ್ಮಾರ್ಟ್‌ಫೋನ್ 4GB RAM + 64GB ಶೇಖರಣಾ ಮಾದರಿಯು ಭಾರತದಲ್ಲಿ 9,999 ರೂ.ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ರಿಯಲ್ಮೆ ಡಾಟ್ ಕಾಮ್ ನಲ್ಲಿ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್ ನಲ್ಲಿ ಖರೀದಿಸುವವರು ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ ಮೂಲಕ ಖರೀದಿಸಿದರೆ 5% ಅನಿಯಮಿತ ಕ್ಯಾಶ್‌ಬ್ಯಾಕ್, ಅನ್ನು ನೀಡಲಿದೆ.


Click it and Unblock the Notifications




