Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಮತ್ತೆ ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ ಸೇಲ್!

ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಬಜೆಟ್ ಬೆಲೆಯ ರಿಯಲ್‌ಮಿ ನಾರ್ಜೊ 10A ಸ್ಮಾರ್ಟ್‌ಫೋನ್ ಈಗಾಗಲೇ ಇ-ಕಾಮರ್ಸ್‌ನಲ್ಲಿ ಮಾರಾಟ ಕಂಡಿದೆ. ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ಇಂದು (ಜುಲೈ 10) ಮಧ್ಯಾಹ್ನ 12ಗಂಟೆಗೆ ಫ್ಲಿಪ್‌ಕಾರ್ಟ್‌ ಹಾಗೂ ರಿಯಲ್‌ ಮಿ ವೆಬ್‌ಸೈಟ್‌ ಮೂಲಕ ಮತ್ತೆ ಸೇಲ್ ಆರಂಭಿಸಲಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 8,499ರೂ.ಗಳಾಗಿದೆ.

Narzo 10A

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. 3GB RAM ವೇರಿಯಂಟ್‌ ಆಯ್ಕೆ ಜೊತೆಗೆ 5000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಮೀಡಿಯಾ ಟೆಕ್ ಹಿಲಿಯೊ G70 ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇನ್ನು ಈ ಫೋನ್ ಬ್ಲೂ ಹಾಗೂ ವೈಟ್‌ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ ಪ್ಲಸ್‌ ಆಗಿದ್ದು ಮಿನಿ ಡ್ರಾಪ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್‌ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ನಿಂದ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ವಿಡಿಯೊ ವೀಕ್ಷಣೆಗೆ ಡಿಸ್‌ಪ್ಲೇ ಅತ್ಯುತ್ತಮವಾಗಿದೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೆ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಇಂಟರ್‌ನಲ್ ಸ್ಟೊರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಮೂರನೇ ಕ್ಯಾಮೆರಾ ಸಹ 2 ಮೆಗಾಪಿಕ್ಸೆಲ್ ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬಿಗ್ ಬ್ಯಾಟರಿ

ಬಿಗ್ ಬ್ಯಾಟರಿ

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 4G LTE, ವೈ-ಫೈ, ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆಗಳು ಸೇರಿವೆ. 164.4x75x8.95mm ಸುತ್ತಳತೆ ಪಡೆದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ ಬೆಲೆ 8,499ರೂ.ಆಗಿದ್ದು, ಈ ಸ್ಮಾರ್ಟ್‌ಫೋನ್‌ ಬ್ಲೂ ಮತ್ತು ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ಗಳು ಇಂದು ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿ.ಕಾಮ್ ತಾಣಗಳಲ್ಲಿ ಖರೀದಿಗೆ ಲಭ್ಯವಿವೆ.

Best Mobiles in India

English summary
Realme Narzo 10A, the budget smartphone from Realme, will go on sale today.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+