ಇಂದು ರಿಯಲ್ ಮಿ Narzo 20 ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!
ರಿಯಲ್ ಮಿ ಸಂಸ್ಥೆಯ ಬಹುನಿರೀಕ್ಷಿತ ರಿಯಲ್ ಮಿ Narzo 20 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿದೆ. ಈ ಹೊಸ ಸರಣಿಯು Narzo 20 ಸ್ಮಾರ್ಟ್‌ಫೋನ್ ಬಜೆಟ್ ದರಲ್ಲಿ ಹೆಚ್ಚಿನ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆ.28) ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 10,499ರೂ. ಆಗಿದೆ.

ಹೌದು, ರಿಯಲ್ ಮಿ ಕಂಪನಿಯ Narzo 20 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ನಡೆಯಲಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ರಿಯಲ್ ಮಿ Narzo 20 ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ.

ಪ್ರೊಸೆಸರ್ ಯಾವುದು
ರಿಯಲ್ ಮಿ Narzo 20 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 4GB RAM ಮತ್ತು 128GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ ವಿಶೇಷ
ರಿಯಲ್ ಮಿ Narzo 20 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್ ಮಿ Narzo 20 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ?
ರಿಯಲ್ ಮಿ Narzo 20 ಸ್ಮಾರ್ಟ್‌ಫೋನ್ 4GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 10,499ರೂ. ಆಗಿದೆ. ಹಾಗೆಯೇ 6GB + 128GB ಬೆಲೆಯು 11,499ರೂ. ಆಗಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಫಸ್ಟ್ ಸೇಲ್ ಆರಂಭಿಸಲಿದೆ.


Click it and Unblock the Notifications




