ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ ಲಾಂಚ್!
ರಿಯಲ್‌ಮಿ ಕಂಪೆನಿಯ ಬಹು ನಿರೀಕ್ಷಿತ ರಿಯಲ್‌ಮಿ ನಾರ್ಜೊ 20 ಸ್ಮಾರ್ಟ್‌ಫೋನ್ ಸರಣಿ ಭಾರತದಲ್ಲಿ ಬಿಡುಗಡೆ ಆಗಿದೆ. ರಿಯಲ್ ನಾರ್ಜೊ 10 ಸರಣಿಯ ಮುಂದುವರೆದ ಆವೃತ್ತಿ ಇದಾಗಿದ್ದು, ನಾರ್ಜೊ 20, ನಾರ್ಜೊ 20A, ನಾರ್ಜೊ 20 ಪ್ರೊ ಮೂರು ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿದೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು ಕೂಡ ಆಕರ್ಷಕ ಫೀಚರ್ಸ್‌ಗಳನ್ನ ಒಳಗೊಂಡಿವೆ. ಸದ್ಯ ಈ ಸರಣಿಯಲ್ಲಿ ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ ಬಹಳ ವಿಶೇಷವಾಗಿದ್ದು, ಆಕರ್ಷಕ ಲುಕ್‌ನಲ್ಲಿ ಎಂಟ್ರಿ ನೀಡಿದೆ.

ಹೌದು, ರಿಯಲ್‌ಮಿ ನಾರ್ಜೊ 20 ಸರಣಿ ಬಿಡುಗಡೆ ಆಗಿದೆ. ಇದರಲ್ಲಿ ರಿಯಲ್ ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ ವಿಭಿನ್ನ ಲುಕ್‌ನಲ್ಲಿ ಎಂಟ್ರಿ ನಿಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಲ್ಲದೆ ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನುಳಿದಂತೆ ರಿಯಲ್ ಮಿ ನಾರ್ಜೊ 20 ಪ್ರೊ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅಲ್ಟ್ರಾ ಸ್ಮೂತ್ ಡಿಸ್‌ಪ್ಲೇ ಆಗಿದ್ದು,20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 480 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 64GB ಹಾಗೂ 8GB RAM + 128GB ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ವಾಡ್ ರಿಯರ್ ಕ್ಯಾಮೆರಾ
ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX 471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಸೆಲ್ಫಿ ಕ್ಯಾಮೆರಾದಲ್ಲಿ ಎಐ ಬ್ಯೂಟಿ, ಫ್ರಂಟ್ ಪನೋರಮಾ, ಫ್ಲಿಪ್ ಸೆಲ್ಫಿ, ನೈಟ್‌ಸ್ಕೇಪ್ ಮತ್ತು ಪೋರ್ಟ್ರೇಟ್ ಮೋಡ್ ಫೀಚರ್ಸ್‌ಗಳು ಕೂಡ ಲಭ್ಯವಿವೆ.

ಬ್ಯಾಟರಿ ಮತ್ತು ಇತರೆ
ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು,65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್ ಮತ್ತು ಮ್ಯಾಗ್ನೆಟೋಮೀಟರ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
Narzo 20 ಪ್ರೊ ಫೋನಿನ 6GB + 64GB ವೇರಿಯಂಟ್ ದರವು 14,999ರೂ. ಆಗಿದೆ. ಹಾಗೆಯೇ 8GB + 128GB ದರವು 16,999ರೂ ಆಗಿದೆ. ಇದೇ ಸೆ.25 ಫಸ್ಟ್ ಸೇಲ್ ಆರಂಭವಾಗಲಿದೆ.


Click it and Unblock the Notifications