Just In
- 44 min ago OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- 3 hrs ago ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- 14 hrs ago ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- 17 hrs ago Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
Don't Miss
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಡಿಮೆ ಪ್ರೈಸ್ನಲ್ಲಿ ರಿಯಲ್ಮಿ Narzo 20 ಸ್ಮಾರ್ಟ್ಫೋನ್ ಲಾಂಚ್!
ರಿಯಲ್ ಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರಿಯಲ್ ಮಿ Narzo 20 ಸ್ಮಾರ್ಟ್ಫೋನ್ ಸರಣಿ ಬಿಡುಗಡೆ ಆಗಿದೆ. ಈ ಸರಣಿಯು Narzo 20, Narzo 20A ಮತ್ತು Narzo 20 ಪ್ರೊ ಮಾಡೆಲ್ ಸ್ಮಾರ್ಟ್ಫೋನ್ಗಳನ್ನು ಒಳಗೊಂಡಿದೆ. ಅವುಗಳಲ್ಲಿ ರಿಯಲ್ ಮಿ Narzo 20 ಸ್ಮಾರ್ಟ್ಫೋನ್ ಮಾಡೆಲ್ ಕಡಿಮೆ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ಗಳಿಂದ ಗ್ರಾಹಕರನ್ನು ಸೆಳೆದಿದೆ.
ಹೌದು, ರಿಯಲ್ ಮಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ Narzo 20 ಸ್ಮಾರ್ಟ್ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ 6,000mAh ಬ್ಯಾಟರಿ ಬ್ಯಾಕ್ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್ಪ್ಲೇ ಡಿಸೈನ್
ರಿಯಲ್ ಮಿ Narzo 20 ಸ್ಮಾರ್ಟ್ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.5-ಇಂಚಿನ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಡಿಸ್ಪ್ಲೇಯ ಅನುಪಾತವು 20:9 ಆಗಿದೆ.
ಪ್ರೊಸೆಸರ್ ಯಾವುದು
ರಿಯಲ್ ಮಿ Narzo 20 ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 4GB RAM ಮತ್ತು 128GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.
ತ್ರಿವಳಿ ಕ್ಯಾಮೆರಾ ವಿಶೇಷ
ರಿಯಲ್ ಮಿ Narzo 20 ಸ್ಮಾರ್ಟ್ಫೋನ್ ಹಿಂಬದಿಯಲ್ಲಿ ಮೂರು ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್ ಮಿ Narzo 20 ಸ್ಮಾರ್ಟ್ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್ ಅನ್ನು ಒಳಗೊಂಡಿದೆ.
ಬೆಲೆ ಎಷ್ಟು ಮತ್ತು ಲಭ್ಯತೆ?
ರಿಯಲ್ ಮಿ Narzo 20 ಸ್ಮಾರ್ಟ್ಫೋನ್ 4GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 10,499ರೂ. ಆಗಿದೆ. ಹಾಗೆಯೇ 6GB + 128GB ಬೆಲೆಯು 11,499ರೂ. ಆಗಿದೆ. ಇದೇ ಸೆ. 28 ಫಸ್ಟ್ ಸೇಲ್ ಆರಂಭಿಸಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999