ದೇಶಿ ಮಾರುಕಟ್ಟೆಯಲ್ಲಿ ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ತನ್ನ ಬಹು ನಿರೀಕ್ಷಿತ ರಿಯಲ್‌ಮಿ ನಾರ್ಜೊ 20 ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಸದ್ಯ ರಿಯಲ್‌ ಕಂಪೆನಿ ರಿಯಲ್‌ಮಿ ನಾರ್ಜೊ 20 ಸರಣಿಯ ಮೂರು ಸ್ಮಾರ್ಟ್‌ಫೋನ್‌ಗಳನ್ನು ಅನಾವರಣಗೊಳಿಸಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ಗಳು ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮೆ ಡಾಟ್ ಕಾಮ್ ಮೂಲಕ ಖರೀದಿಗೆ ಲಭ್ಯವಾಗಲಿವೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳಲ್ಲಿ ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ತಿಳಿದುಕೊಳ್ಳೋಣ ಬನ್ನಿರಿ.

ರಿಯಲ್‌ಮಿ

ಹೌದು, ರಿಯಲ್‌ಮಿ ನಾರ್ಜೊ 20 ಸರಣಿಯ ಮೂರು ಸ್ಮಾಟರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಇದರಲ್ಲಿ ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 665 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರಿಯಲ್‌ ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಸಹ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 3GB RAM + 32GB ಮತ್ತು 4GB RAM + 64GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ರಿಯಲ್‌ ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ F /1.8 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ "ರೆಟ್ರೊ" ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ರಿವರ್ಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 3GB RAM + 32GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ ಬೆಲೆ 8,499 ರೂ. ಹಾಗೂ 4GB RAM + 64GB ಸ್ಟೋರೇಜ್ ಆಯ್ಕೆಯ ಬೆಲೆ 9,499. ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಡಾಟ್ ಕಾಮ್ ಮೂಲಕ ಖರೀದಿಗೆ ಲಭ್ಯವಾಗಲಿವೆ.

Best Mobiles in India

English summary
Realme Narzo 20A has 32GB and 64GB options that both are expandable via microSD card (up to 256GB) through a dedicated slot.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X