ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ತನ್ನು ಬಹು ನಿರೀಕ್ಷಿತ ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಪಡೆದುಕೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್ ಅನ್ನು ಮಲೇಷ್ಯಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿರುವುದರಿಂದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಮೇ 4 ರ ಕಾರ್ಯಕ್ರಮವನ್ನು ಮುಂದೂಡಿದ್ದರು. ಈವೆಂಟ್‌ನ ಮುಂದಿನ ದಿನಾಂಕ ಸ್ಪಷ್ಟವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಸ್ಕ್ರೀನ್-ಟು-ಬಾಡಿ ಅನುಪಾತ 90.5 ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಿಕ್ಸೆಲ್ ಸಾಂದ್ರತೆಯು 405 ಪಿಪಿಐ ಹೊಂದಿದೆ.

ಪ್ರೊಸೆಸರ್ ಯಾವುದು?
ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ 4ಕೆ 30 ಎಫ್‌ಪಿಎಸ್ ವೀಡಿಯೊಗಳಿಗೆ ಬೆಂಬಲಿಸಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಇನ್-ಡಿಸ್ಪ್ಲೇ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್‌ಮಿ ನಾರ್ಜೋ 30 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ-ಸಿ ಪೋರ್ಟ್ ಮೂಲಕ 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ ಎಂವೈಆರ್ 799 (ಸುಮಾರು 14,200 ರೂ.)ಬೆಲೆಯನ್ನು ಹೊಂದಿದೆ. ಆದಾಗ್ಯೂ, ಮೊದಲ ಮಾರಾಟದಲ್ಲಿ ಫೋನ್ ಖರೀದಿಸುವವರು ಇದನ್ನು ಎಂವೈಆರ್ 699ಬೆಲೆಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ರೇಸಿಂಗ್ ಬ್ಲೂ ಮತ್ತು ರೇಸಿಂಗ್ ಸಿಲ್ವರ್ ಬಣ್ಣಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಆಗುವ ಸಾಧ್ಯತೆ ಇದೆ.


Click it and Unblock the Notifications





