ಭಾರತದಲ್ಲಿ ರಿಯಲ್‌ಮಿ ನಾರ್ಜೊ 30 5G ಮತ್ತು ನಾರ್ಜೊ 30 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ರಿಯಲ್‌ಮಿ ಇದೀಗ ಹೊಸ ರಿಯಲ್‌ಮಿ ನಾರ್ಜೊ 30 5G ಮತ್ತು ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದರಲ್ಲಿ ರಿಯಲ್‌ಮಿ ನಾರ್ಜೊ 30 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಹೊಂದಿದ್ದರೆ, ರಿಯಲ್‌ಮಿ ನಾರ್ಜೊ 30 ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ ನಾರ್ಜೊ 30 5G ಮತ್ತು ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಈ ಎರಡೂ ಫೋನ್‌ಗಳು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿವೆ. ಜೊತೆಗೆ 5,000mAh ಬ್ಯಾಟರಿ ಮತ್ತು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ರಿಯಲ್‌ಮಿ ನಾರ್ಜೊ 30 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 90.5% ಸ್ಕ್ರೀನ್‌ ಟು ಬಾಡಿ ಅನುಪಾತ ಹೊಂದಿದೆ. ಈ ಡಿಸ್‌ಪ್ಲೇ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ರಿಯಲ್‌ಮಿ ನಾರ್ಜೊ 30 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಸ್ಟ್ಯಾಂಡ್‌ಬೈನಲ್ಲಿ ಒಂದು ತಿಂಗಳ ಕಾಲ ಉಳಿಯಬಹುದು, ಆನ್‌ಲೈನ್ ವೀಡಿಯೊಗಳನ್ನು 16 ಗಂಟೆಗಳ ಕಾಲ ನಿರಂತರವಾಗಿ ಸ್ಟ್ರೀಮ್ ಮಾಡಬಹುದು ಅಥವಾ ಒಂದೇ ಚಾರ್ಜ್‌ನಲ್ಲಿ 11 ಗಂಟೆಗಳ ಕಾಲ ಆಟಗಳನ್ನು ಆಡಲು ಬಳಸಬಹುದು ಎಂದು ರಿಯಲ್‌ಮಿ ಹೇಳಿಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಜಿಪಿಎಸ್ / ಎ-ಜಿಪಿಎಸ್, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 30

ರಿಯಲ್‌ಮಿ ನಾರ್ಜೊ 30

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಕೂಡ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಆದರೆ ಈ ಡಿಸ್‌ಪ್ಲೇ 580 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ರಿಯಲ್‌ಮಿ ನಾರ್ಜೊ 30 ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕೂಡ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿ ಹೊಂದಿದ್ದು, 30W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಫೋನ್ ಸ್ಟ್ಯಾಂಡ್‌ಬೈನಲ್ಲಿ 32 ದಿನಗಳವರೆಗೆ, 48 ಗಂಟೆಗಳ ಕರೆ, 16 ಗಂಟೆಗಳ ಆನ್‌ಲೈನ್ ಮೂವಿ ಸ್ಟ್ರೀಮಿಂಗ್ ಅಥವಾ ಒಂದೇ ಚಾರ್ಜ್‌ನಲ್ಲಿ 11 ಗಂಟೆಗಳ ಗೇಮಿಂಗ್ ಇರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ ನಾರ್ಜೊ 30 5G ಭಾರತದಲ್ಲಿ 6GB RAM + 128GB ಶೇಖರಣಾ ಆಯ್ಕೆಗೆ 15,999 ರೂ. ಬೆಲೆ ಹೊಂದಿದೆ. ಇನ್ನು ರಿಯಲ್‌ಮಿ ನಾರ್ಜೊ 30 ಭಾರತದಲ್ಲಿ 4GB RAM+ 64GB ಶೇಖರಣಾ ಆಯ್ಕೆಗೆ 12,499ರೂ. ಬೆಲೆ ಹೊಂದಿದೆ. ಅಲ್ಲದೆ 6GB RAM + 128GB ಶೇಖರಣಾ ಮಾದರಿಗೆ 14,499 ರೂ. ಬೆಲೆಯನ್ನು ಹೊಂದಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ರೇಸಿಂಗ್ ಬ್ಲೂ ಮತ್ತು ರೇಸಿಂಗ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಬರಲಿದೆ. ರಿಯಲ್‌ಮಿ ನಾರ್ಜೋ 30 5G ಮೊದಲ ಮಾರಾಟ ಜೂನ್ 30 ರಂದು ನಡೆಯಲಿದೆ. ಹಾಗೆಯೇ ರಿಯಲ್‌ಮಿ ನಾರ್ಜೋ 30 ಜೂನ್ 29 ರಂದು ಮಾರಾಟವಾಗಲಿದೆ. ಎರಡೂ ಫೋನ್‌ಗಳು ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮೆ.ಕಾಂನಲ್ಲಿ ಮಾರಾಟಕ್ಕೆ ಲಭ್ಯವಿರುತ್ತವೆ ಮತ್ತು ಆಫ್‌ಲೈನ್ ಮಳಿಗೆಗಳಲ್ಲಿಯೂ ಲಭ್ಯವಿರುತ್ತವೆ.

Best Mobiles in India

English summary
Realme Narzo 30 5G and Realme Narzo 30 both come with a 48-megapixel main camera at the back.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X