ಫ್ಲಿಪ್‌ಕಾರ್ಟ್‌ನಲ್ಲಿ ಇಂದು ರಿಯಲ್‌ಮಿ ನಾರ್ಜೊ 30 ಪ್ರೊ ಸ್ಮಾರ್ಟ್‌ಫೋನ್ ಸೇಲ್!
ರಿಯಲ್ ಮಿ ಸಂಸ್ಥೆ ಇತ್ತೀಚಿಗಷ್ಟೆ ತನ್ನ ಜನಪ್ರಿಯ Narzo ಸರಣಿಯಲ್ಲಿ ಬಿಡುಗಡೆ ಮಾಡಿರುವ ಹೊಸ ರಿಯಲ್ ಮಿ ನಾರ್ಜೊ 30 ಸ್ಮಾರ್ಟ್‌ಫೋನ್ ಈಗಾಗಲೇ ಫಸ್ಟ್ ಸೇಲ್ ಕಂಡಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾ.8) ಮಧ್ಯಾಹ್ನ 12 ಗಂಟೆಗೆ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಸೆಕೆಂಡ್ ಸೇಲ್ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನಿನ ಬೇಸಿಕ್ ವೇರಿಯಂಟ್‌ನ ಬೆಲೆಯು 16,999ರೂ.ಆಗಿದೆ.

ಹೌದು, ರಿಯಲ್‌ಮಿ ಸಂಸ್ಥೆ ತನ್ನ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ ಇಂದು ಫ್ಲಿಪ್‌ಕಾರ್ಟ್ ತಾಣದಲ್ಲಿ ಮಾರಾಟ ಆಗಲಿದೆ. ಈ ಸ್ಮಾರ್ಟ್‌ಫೋನ್ 6GB RAM + 64GB ಹಾಗೂ 8GB RAM + 128GB ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎನ್ನುವುದನ್ನು ಮುಂದೆ ನೋಡೋಣ ಬನ್ನಿರಿ.

ಆಕರ್ಷಕ ಡಿಸ್‌ಪ್ಲೇ
ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಗರಿಷ್ಠ 600 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಬಲ
ರಿಯಲ್‌ಮಿ ನಾರ್ಜೊ 30 ಪ್ರೊ 5G ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM + 64GB ಹಾಗೂ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ.

ಟ್ರಿಪಲ್ ಕ್ಯಾಮೆರಾ ರಚನೆ
ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ ನಾರ್ಜೊ 30 ಪ್ರೊ 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ V5.1 ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ ನಾರ್ಜೋ 30ಪ್ರೊ 5G ಸ್ಮಾರ್ಟ್‌ಫೋನ್ ಬೆಲೆ 6GB RAM + 64GB ಸ್ಟೋರೇಜ್ ವೇರಿಯಂಟ್ 16,999 ರೂ. ಹಾಗೂ 8GB RAM + 128GB ಸ್ಟೋರೇಜ್ ಮಾದರಿಯು ರೂ. 19,999 ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ವೋರ್ಡ್ ಬ್ಲ್ಯಾಕ್ ಮತ್ತು ಬ್ಲೇಡ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಇಂದು ಮಧ್ಯಾಹ್ನ 12 ರಿಂದ ಖರೀದಿಗೆ ಲಭ್ಯವಿರುತ್ತದೆ. ಫ್ಲಿಪ್‌ಕಾರ್ಟ್, ರಿಯಲ್‌ಮಿ.ಕಾಮ್ ತಾಣಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








