ಇಂದು ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ರಿಯಲ್ ಮಿ ಸಂಸ್ಥೆ ತನ್ನ ಬಹುನಿರೀಕ್ಷಿತ ರಿಯಲ್ ಮಿ ನಾರ್ಜೊ 30 ಸ್ಮಾರ್ಟ್‌ಫೋನ್ ಸರಣಿಯನ್ನು ಈಗಾಗಲೇ ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಹೊಸ ಸರಣಿಯ Narzo 30 ಪ್ರೊ 5G ಸ್ಮಾರ್ಟ್‌ಫೋನ್ ಬಜೆಟ್ ದರಲ್ಲಿ ಹೆಚ್ಚಿನ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾ.5) ಮಧ್ಯಾಹ್ನ 12 ಗಂಟೆಗೆ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 16,999ರೂ. ಆಗಿದೆ.

ಹೌದು, ರಿಯಲ್‌ಮಿ ಸಂಸ್ಥೆ ತನ್ನ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಮೊದಲ ಬಾರಿಗೆ ಸೇಲ್ ಆಗಲಿದೆ. ಇದರಲ್ಲಿ ರಿಯಲ್‌ಮಿ ನಾರ್ಜೊ 30 ಪ್ರೊ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಒಳಗೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಗರಿಷ್ಠ 600 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM + 64GB ಹಾಗೂ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ
ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ V5.1 ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ ನಾರ್ಜೋ 30ಪ್ರೊ 5G ಸ್ಮಾರ್ಟ್‌ಫೋನ್ ಬೆಲೆ 6GB RAM + 64GB ಸ್ಟೋರೇಜ್ ರೂಪಾಂತರಕ್ಕೆ 16,999 ರೂ. ಹಾಗೂ 8GB RAM + 128GB ಸ್ಟೋರೇಜ್ ಮಾದರಿಯು ರೂ. 19,999 ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ವೋರ್ಡ್ ಬ್ಲ್ಯಾಕ್ ಮತ್ತು ಬ್ಲೇಡ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಇಂದು ಮಧ್ಯಾಹ್ನ 12 ರಿಂದ ಖರೀದಿಗೆ ಲಭ್ಯವಿರುತ್ತದೆ. ಫ್ಲಿಪ್‌ಕಾರ್ಟ್, ರಿಯಲ್‌ಮಿ.ಕಾಮ್ ಮತ್ತು ಮೇನ್‌ಲೈನ್ ಆಫ್‌ಲೈನ್ ಮಳಿಗೆಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ. ಅಲ್ಲದೆ ಫ್ಲಿಪ್‌ಕಾರ್ಟ್‌ನಿಂದ ಹೊಸ ರಿಯಲ್‌ಮಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳು ಮತ್ತು ಇಎಂಐ ವಹಿವಾಟುಗಳೊಂದಿಗೆ 1,000ರೂ ತ್ವರಿತ ರಿಯಾಯಿತಿಯನ್ನು ಪಡೆಯಬಹುದಾಗಿದೆ. ಈ ಫೋನ್ ಆಫ್‌ಲೈನ್ ಮಳಿಗೆಗಳ ಮೂಲಕವೂ ಲಭ್ಯವಿರುತ್ತದೆ.


Click it and Unblock the Notifications








