ರಿಯಲ್‌ಮಿ ನಾರ್ಜೊ 30 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ರಿಯಲ್‌ಮಿ ಹೆಸರುವಾಸಿಯಾಗಿದೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಕೆಲವೇ ವರ್ಷಗಳಲ್ಲಿ ಮುಂಚೂಣಿ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರ ಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ನಾರ್ಜೊ 30 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಹಾಗೂ ಇಮೇಜ್‌ಗಳು ಆನ್‌ಲೈನ್‌ನಲ್ಲಿ ಬಹಿರಂಗಗೊಂಡಿವೆ.

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ ನಾರ್ಜೊ 30 ಪ್ರೊ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಇಮೇಜ್‌ಗಳು ಆನ್‌ಲೈನ್‌ನಲ್ಲಿ ಸೋರಿಕೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 5G ಸಂಪರ್ಕವನ್ನು ಒಳಗೊಂಡಿರುತ್ತದೆ ಎಂದು ಪಟ್ಟಿ ಸೂಚಿಸುತ್ತದೆ. ನಾರ್ಜೊ ಸರಣಿಯು ಮುಂದಿನ ತಲೆಮಾರಿನ ನೆಟ್‌ವರ್ಕ್ ಸಂಪರ್ಕವನ್ನು ಪಡೆದಿರುವ ಮೊದಲ ಸ್ಮಾರ್ಟ್‌ಫೋನ್ ಇದಾಗಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಪೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ರಿಯಲ್‌ಮಿ ನಾರ್ಜೊ 30 ಪ್ರೊ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 405 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್
ಇದು ಮೀಡಿಯಾ ಟೆಕ್ ಹಿಲಿಯೋ G95 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM+ 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎನ್ನಲಾಗಿದೆ.

ಕ್ಯಾಮೆರಾ
ರಿಯಲ್‌ಮಿ ನಾರ್ಜೊ 30 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇದು 4800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, 4G ನೆಟ್‌ವರ್ಕ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವಾಗ ಬಿಡುಗಡೆ ಆಗಲಿದೆ ಹಾಗೂ ಇದರ ಬೆಲೆ ಎಷ್ಟಿರಲಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications